ಮೊದಲ ದಿನ 7.45 ಕೋಟಿ ಗಳಿಕೆ ಮಾಡಿದ ಆಡುಜೀವಿತಂ

ಪೃಥ್ವಿರಾಜ್ ಸುಕುಮಾರನ್  ನಟಿಸಿರುವ ಬರೋಬ್ಬರಿ 16 ವರ್ಷಗಳ ಹಿಂದೆ ಪ್ರಾರಂಭವಾದ ಸಿನಿಮಾ ಬಹುನಿರೀಕ್ಷಿತ ಸಿನಿಮಾ ‘ಆಡುಜೀವಿತಂ’ ಮಾರ್ಚ್ 28ಕ್ಕೆ ಬಿಡುಗಡೆ ಆಗಿದ್ದು, ಮೊದಲ ದಿನ ಸಿನಿಮಾ ಮಾಡಿದ ಕಲೆಕ್ಷನ್ ಎಷ್ಟು? ಇಲ್ಲಿದೆ ಮಾಹಿತಿ.

ಕನ್ನಡ ಸೇರಿದಂತೆ ಇನ್ನೂ ಕೆಲವು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆ ಆಗಿದ್ದ ‘ಆಡುಜೀವಿತಂ’ ಸಿನಿಮಾ ಮೊದಲ ದಿನ ಏಳು ಕೋಟಿ ರೂಪಾಯಿ ಗಳಿಕೆ ಮಾಡಿದೆ. ಗುರುವಾರದಂದು 7.45 ಕೋಟಿ ಗಳಿಕೆ ಮಾಡಿದ ಸಿನಿಮಾ ವಾರಾಂತ್ಯಕ್ಕೆ ಗಳಿಕೆಯನ್ನು ಹೆಚ್ಚಿಸಿಕೊಳ್ಳುವ ಎಲ್ಲ ಸಾಧ್ಯತೆಗಳು ಇವೆ.

ಸ್ಟಾರ್ ನಟರ ಮಾಸ್, ಕಮರ್ಶಿಯಲ್ ಸಿನಿಮಾಗಳಿಗೆ ಹೋಲಿಸಿದರೆ ಇದು ಕಡಿಮೆ ಅನಿಸಬಹುದು. ಆದರೆ ಮಲಯಾಳಂ ಸಿನಿಮಾ ಒಂದಕ್ಕೆ ಇದು ಬಹಳ ಉತ್ತಮ ಆರಂಭ.

ಸಿನಿಮಾ ಕರ್ನಾಟಕ ಹಾಗೂ ತೆಲುಗು ರಾಜ್ಯಗಳಿಂದ ತಲಾ 40 ಲಕ್ಷ ರೂಪಾಯಿ ಗಳಿಕೆ ಮಾಡಿದೆ. ತಮಿಳುನಾಡಿನಲ್ಲಿ 55 ಲಕ್ಷ ಗಳಿಸಿದ್ದರೆ ಹಿಂದಿಯಿಂದ ಬಂದಿರುವ ಗಳಿಕೆ ಕೇವಲ 10 ಲಕ್ಷ ರೂಪಾಯಿ. ಇನ್ನುಳಿದದ್ದೆಲ್ಲ ಕೇರಳದಿಂದಲೇ ಬಂದಿದೆ.

‘ಆಡುಜೀವಿತಂ’ ಸಿನಿಮಾ ಅದೇ ಹೆಸರಿನ ಮಲಯಾಳಂ ಕಾದಂಬರಿ ಆಧರಿಸಿದ್ದಾಗಿದೆ. ನೈಜ ಘಟನೆಯನ್ನು ಆಧರಿಸಿ ಕಾದಂಬರಿಯನ್ನು ರಚಿಸಲಾಗಿದೆ. ಕೇರಳದ ವ್ಯಕ್ತಿಯೊಬ್ಬ ಆತನ ಇಚ್ಛೆಗೆ ವಿರುದ್ಧವಾಗಿ ಗಲ್ಫ್ ರಾಷ್ಟ್ರವೊಂದರಲ್ಲಿ ಕುರಿ ಕಾಯುವ ಕೆಲಸಕ್ಕೆ ಸೇರಿ, ಅಲ್ಲಿಂದ ತಪ್ಪಿಸಿಕೊಂಡು ಬರುವ ಕತೆಯನ್ನು ಈ ಸಿನಿಮಾ ಒಳಗೊಂಡಿದೆ.

Ashika S

Recent Posts

ಶವರ್ಮಾ ತಿಂದು ಪ್ರಾಣಬಿಟ್ಟ 19 ವರ್ಷದ ಯುವಕ

ಚಿಕನ್​​ ಶವರ್ಮಾ ತಿಂದು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂಥದ್ದೇ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, 19 ವರ್ಷದ ಯುವಕನೊಬ್ಬ ಚಿಕನ್ ಶವರ್ಮಾ…

26 mins ago

ಮೇ 11ರಿಂದ 13ರವರೆಗೆ ವಾಮಂಜೂರಿನಲ್ಲಿ ಕೃಷಿ ಮೇಳ, ದಶಮ ಸಂಭ್ರಮ

ಇದೇ ಮೇ 11ರಿಂದ 13ರವರೆಗೆ ವಾಮಂಜೂರಿನ ಶ್ರೀ ಅಮೃತೇಶ್ವರ ದೇವಸ್ಥಾನದ ಮುಂಭಾಗ ಜರುಗಲಿದೆ ಎಂದು ಗುರುಪುರ ವ್ಯವಸಾಯ ಸೇವಾ ಸಹಕಾರಿ…

28 mins ago

ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂನಿಂದ ವಾಟ್ಸಾಪ್ ನಂಬರ್ ಬಿಡುಗಡೆ

ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂ ಎಂಟು ಜಿಲ್ಲೆಗಳಿಗೆ ವಾಟ್ಸಾಪ್ ನಂಬರ್ ಬಿಡುಗಡೆ ಮಾಡಿದ್ದು, ಬೆಸ್ಕಾಂ ವ್ಯಾಪ್ತಿಯ ಜಿಲ್ಲೆಯ ಜನರು…

42 mins ago

ಎಸ್‌ಎಸ್‌ಎಲ್‌ಸಿ 2,3ನೇ ಪರೀಕ್ಷೆ ಬರೆಯುವವರಿಗೆ ಸ್ಪೆಷಲ್‌ ಕ್ಲಾಸ್‌ ಯೋಜನೆ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

45 mins ago

ಚುನಾವಣೆ ಮುಕ್ತಾಯದ ಬೆನ್ನಲ್ಲೇ ಆಕ್ಟಿವ್ ಆದ ಶಾಸಕ ಪ್ರಭು ಚವಾಣ್

ಲೋಕಸಭಾ ಚುನಾವಣೆ ಮುಕ್ತಾಯ ಬೆನ್ನಲ್ಲೇ ಬೀದರ್ ಜಿಲ್ಲೆ ಔರಾದ್ ಶಾಸಕ ಪ್ರಭು ಚವಾಣ್ ಕ್ಷೇತ್ರದಲ್ಲಿ ಆಕ್ಟಿವ್ ಆಗಿದ್ದಾರೆ. ಅನಾರೋಗ್ಯ ಕಾರಣ…

59 mins ago

ಶಾಸಕ ಇಕ್ಬಾಲ್‌ ಹುಸೇನ್‌ ವಿಡಿಯೋ ವೈರಲ್‌ ಕೇಸ್‌ : ಇಬ್ಬರ ಬಂಧನ

ಶಾಸಕ ಇಕ್ಬಾಲ್‌ ಹಸೇನ್‌ ಅವರು ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತೆ ಜೊತೆ ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವಿಡಿಯೋ ವೈರಲ್‌ ಮಾಡಿದ್ದ ಆರೋಪದಡಿ…

1 hour ago