ಕಾಲಿವುಡ್ ಸ್ಟಾರ್ ಜಯಂ ರವಿ ಅವರು ತಮ್ಮ ಪತ್ನಿ ಆರತಿಗೆ ವಿಚ್ಛೇದನ ನೀಡಿರುವುದಾಗಿ ಘೋಷಿಸಿದ್ದಾರೆ. ದಂಪತಿಗೆ ಇಬ್ಬರು ಗಂಡು ಮಕ್ಕಳೂ ಇದ್ದಾರೆ. ಇತ್ತೀಚೆಗಷ್ಟೇ ಇವರಿಬ್ಬರ ನಡುವೆ ಭಿನ್ನಾಭಿಪ್ರಾಯ ಉಂಟಾಗಿ ಬೇರ್ಪಟ್ಟಿದ್ದಾರೆ.
ಎರಡು ದಿನಗಳ ಹಿಂದಷ್ಟೇ ಜಯಂ ರವಿ ಅವರು ತಮ್ಮ ಇನ್ಸ್ಟಾಗ್ರಾಂನಲ್ಲಿ ಪತ್ರವೊಂದನ್ನು ಹಂಚಿಕೊಳ್ಳುವ ಮೂಲಕ ಡಿವೋರ್ಸ್ ಖಚಿತಪಡಿಸಿದರು. ಈ ಹಿನ್ನೆಲೆಯಲ್ಲಿ ಇಂದು ಜಯಂ ರವಿ ಪತ್ನಿ ‘ಆರತಿ ರವಿ’ ಕೂಡ ಪತ್ರವೊಂದನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಆದರೆ, ಪತ್ರದಲ್ಲಿ ಆರತಿ ಅವರು ಬರೆದಿರುವ ಅಂಶಗಳು ಕಾಲಿವುಡ್ ಅಂಗಳದಲ್ಲಿ ಭಾರಿ ಸಂಚಲನ ಮೂಡಿಸಿದೆ.
ನನ್ನ ಗಮನಕ್ಕೆ ತರದೆ ಅಥವಾ ಒಪ್ಪಿಗೆಯಿಲ್ಲದೆ ನಮ್ಮ ವೈವಾಹಿಕ ಜೀವನದ ಬಗ್ಗೆ ಇತ್ತೀಚಿಗೆ ಹೊರಡಿಸಿದ ಸಾರ್ವಜನಿಕ ಪ್ರಕಟಣೆಯಿಂದ ನಾನು ಆಘಾತಕ್ಕೆ ತೀವ್ರ ಒಳಗಾಗಿದ್ದೇನೆ ಮತ್ತು ದುಃಖಿತಳಾಗಿದ್ದೇನೆ. 18 ವರ್ಷಗಳ ವೈವಾಹಿಕ ಜೀವನಕ್ಕೆ ಸಂಬಂಧಿಸಿದ ಮಹತ್ವದ ವಿಷಯವನ್ನು ತುಂಬಾ ಗೌರವಯುತವಾಗಿ ಮತ್ತು ಗೌಪ್ಯತೆಯಿಂದ ನಿರ್ವಹಿಸಬೇಕೆಂದು ನಾನು ನಂಬುತ್ತೇನೆ.
ನಾನು ನನ್ನ ಪತಿಯೊಂದಿಗೆ ನೇರವಾಗಿ ಮಾತನಾಡಲು ಹಲವು ಬಾರಿ ಪ್ರಯತ್ನಿಸಿದೆ. ದುರದೃಷ್ಟವಶಾತ್, ನನಗೆ ಆ ಅವಕಾಶ ಸಿಗಲಿಲ್ಲ. ಇದೀಗ ಈ ಡಿಢೀರ್ ಡಿವೋರ್ಸ್ ಪ್ರಕಟಣೆಯಿಂದ ನನ್ನ ಮಕ್ಕಳು ಮತ್ತು ನಾನು ಆಘಾತಕ್ಕೆ ಒಳಗಾಗಿದ್ದೇವೆ. ನಮ್ಮ ಮದುವೆಯನ್ನು ವಿಸರ್ಜಿಸುವ ಮತ್ತು ಪ್ರತ್ಯೇಕಗೊಳ್ಳುವ ನಿರ್ಧಾರವು ಸಂಪೂರ್ಣವಾಗಿ ಏಕಪಕ್ಷೀಯವಾಗಿದೆ. ಇದರಿಂದ ನಮ್ಮ ಕುಟುಂಬಕ್ಕೆ ಯಾವುದೇ ಪ್ರಯೋಜನವಾಗಿಲ್ಲ. ಈ ಘಟನೆಯು ನಮಗೆ ಅತೀವ ದುಃಖವನ್ನುಂಟುಮಾಡಿದ್ದರೂ, ನಾನು ಗೌರವದಿಂದ ವರ್ತಿಸಬೇಕುಕೆಂದು ಭಾವಿಸುತ್ತೇನೆ. ಈ ಕಾರಣಕ್ಕೆ ನಾನು ಈವರೆಗೂ ಈ ಬಗ್ಗೆ ಸಾರ್ವಜನಿಕವಾಗಿ ಮಾತನಾಡಿಲ್ಲ.
ಇನ್ನು ಈ ಪ್ರಕರಣದಲ್ಲಿ ನನ್ನನ್ನು ದೂಷಿಸುವ ಮತ್ತು ನನ್ನ ಪಾತ್ರವನ್ನು ತಪ್ಪಾಗಿ ನಿರೂಪಿಸುವ ಸುದ್ದಿಯಿಂದ ನಾನು ತೀವ್ರವಾಗಿ ನೋಂದಿದ್ದೇನೆ. ತಾಯಿಯಾಗಿ ನನ್ನ ಮೊದಲ ಆದ್ಯತೆ ಯಾವಾಗಲೂ ನನ್ನ ಮಕ್ಕಳ ಯೋಗಕ್ಷೇಮವಾಗಿದೆ. ಈ ಘಟನೆ ನನ್ನ ಮಕ್ಕಳ ಜೀವನದ ಮೇಲೆ ಪರಿಣಾಮ ಬೀರುತ್ತದೆ ಎಂದು ನಾನು ಹೆದರುತ್ತೇನೆ. ನಮ್ಮ ಮಕ್ಕಳ ಯೋಗಕ್ಷೇಮದ ಮೇಲೆ ನನ್ನ ಗಮನವಿದೆ ಮತ್ತು ಈ ಕಷ್ಟದ ಸಮಯದಲ್ಲಿ ನಾನು ಅವರನ್ನು ರಕ್ಷಿಸುತ್ತೇನೆ. ನಾನು ಪತ್ರಿಕೆಗಳು, ಮಾಧ್ಯಮಗಳು ಮತ್ತು ನಮ್ಮ ಆತ್ಮೀಯ ಅಭಿಮಾನಿಗಳಿಗೆ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆ, ಏಕೆಂದರೆ, ಸಮಯಕ್ಕೆ ಸತ್ಯವು ಹೊರಬರುತ್ತದೆ ಎಂದು ನಾನು ಭಾವಿಸುತ್ತೇನೆ. ನಿಮ್ಮ ದಯೆ ಮತ್ತು ಪ್ರೀತಿ ನಮ್ಮ ಶಕ್ತಿ. ನಮ್ಮ ಜೀವನದ ಈ ಅಧ್ಯಾಯದಲ್ಲಿ ನಿಮ್ಮ ಗೌಪ್ಯತೆಯನ್ನು ಕೋರುತ್ತೇನೆ ಎಂದಿದ್ದಾರೆ.