Categories: ಮನರಂಜನೆ

ರಾಮನ ಪಾತ್ರ ಮಾಡಿದ ನಟ ಅರುಣ್ ಗೋವಿಲ್ ಗೆ ಬಿಜೆಪಿ ಟಿಕೆಟ್

ರಾಮಾಯಣ ಧಾರಾವಾಹಿಯಲ್ಲಿ ರಾಮನ ಪಾತ್ರ ಮಾಡಿದ್ದ ನಟ ಅರುಣ್ ಗೋವಿಲ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದ್ದು, ಈ ಬಾರಿ ಲೋಕಸಭೆ ಅಖಾಡದಲ್ಲಿ ಅರುಣ್ ಗೋವಿಲ್ ಕಾಣಿಸಿಕೊಳ್ಳಲಿದ್ದಾರೆ.

ಟಿಕೆಟ್ ನೀಡಿದ್ದಕ್ಕಾಗಿ ಆಯ್ಕೆ ಸಮಿತಿ ಮತ್ತು ನರೇಂದ್ರ ಮೋದಿ ಅವರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು. ಮೀರತ್​ ಕ್ಷೇತ್ರದಿಂದ ನನ್ನನ್ನು ಸಂಸದ ಸ್ಥಾನಕ್ಕೆ ಅಭ್ಯರ್ಥಿಯಾಗಿ ಆಯ್ಕೆ ಮಾಡುವ ಮೂಲಕ ದೊಡ್ಡ ಜವಾಬ್ದಾರಿ ನೀಡಿದ್ದೀರಿ. ಭಾರತೀಯ ಜನತಾ ಪಕ್ಷ ಮತ್ತು ಜನರು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳಲು ಸಂಪೂರ್ಣ ಪ್ರಯತ್ನ ಮಾಡುತ್ತೇನೆ. ಜೈ ಶ್ರೀರಾಮ್​’ ಎಂದು ಅರುಣ್​ ಗೋವಿಲ್​ ಅವರು ಎಕ್ಸ್​ (ಟ್ವಿಟರ್) ಖಾತೆಯಲ್ಲಿ ಪೋಸ್ಟ್​ ಮಾಡಿದ್ದಾರೆ.

ಇದರ ಜೊತೆಗೆ ನಟಿ ಕಂಗನಾ ರಣಾವತ್ ಅವರಿಗೂ ಬಿಜೆಪಿಯಿಂದ ಟಿಕೆಟ್ ಸಿಕ್ಕಿದ್ದು, ಬಾಲಿವುಡ್‌ ನಟಿ ಕಂಗನಾ ರಣಾವತ್‌ ಗೆ ತವರು ರಾಜ್ಯ ಹಿಮಾಚಲ ಪ್ರದೇಶದ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಟಿಕೆಟ್ ಘೋಷಣೆ ಆಗುತ್ತಿದ್ದಂತೆಯೇ ಕಂಗನಾ ಮಂಡಿ ಕ್ಷೇತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕಂಗನಾ ರಣಾವತ್ ತವರು ರಾಜಕೀಯಕ್ಕೆ ಬರುತ್ತಾರೆ ಎನ್ನುವ ಸುದ್ದಿ ಹಲವು ತಿಂಗಳುಗಳಿಂದ ಸದ್ದು ಮಾಡುತ್ತಿದ್ದು, ಅವರು ಕೂಡ ಕೃಷ್ಣ ಕಣ್ಬಿಟ್ಟರೆ ರಾಜಕೀಯಕ್ಕೆ ಬರೋದು ದೊಡ್ಡ ವಿಷಯವೇ ಅಲ್ಲ ಎಂದೂ ಹೇಳಿದ್ದರು. ಜೊತೆಗೆ ರಾಜಕೀಯ ಮುಖಂಡರನ್ನು ಭೇಟಿ ಮಾಡುವ ಮೂಲಕ ಟಿಕೆಟ್ ಬೇಡಿಕೆಯನ್ನೂ ಇಟ್ಟಿದ್ದರು ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

Chaitra Kulal

Recent Posts

ಏರ್‌ ಇಂಡಿಯಾ 30 ಸಿಬ್ಬಂದಿಗಳ ವಜಾ : 74 ವಿಮಾನಗಳ ಹಾರಾಟ ರದ್ದು

ಸಾಮೂಹಿಕ ಅನಾರೋಗ್ಯದ ರಜೆ ತೆಗೆದುಕೊಂಡ ಏರ್‌ ಇಂಡಿಯಾದ 30 ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ. ಬುಧವಾರ (ಮೇ 9)ದಿಂದ ಸುಮಾರು 300 ಸಿಬ್ಬಂದಿ…

7 mins ago

ಎಸ್​ಎಸ್​ಎಲ್​​​ಸಿ ಫಲಿತಾಂಶ; ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬೆಳ್ತಂಗಡಿ ವಿದ್ಯಾರ್ಥಿ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು…

16 mins ago

ರೇವಣ್ಣ ಲೈಂಗಿಕ ಹಗರಣ: ಮಹಿಳಾ ಕಾಂಗ್ರೆಸ್ ನಿಂದ ಪೊರಕೆ ಹಿಡಿದು ಪ್ರತಿಭಟನೆ

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಖಂಡಿಸಿ ಹಾಗೂ ಪ್ರಜ್ವಲ್ ರೇವಣ್ಣರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್…

23 mins ago

ಎಸ್ಎಸ್​ಎಲ್​ಸಿ ಫಲಿತಾಂಶ: ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ

ಇಂದು 2023-24 ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

37 mins ago

ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ : ಇಬ್ಬರು ಮಹಿಳೆಯರಿಗೆ ಗಾಯ

ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟಗೊಂಡ ಪರಿಣಾಮ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ…

39 mins ago

ಮಕ್ಕಳನ್ನು ಕೊಂದು ಮಹಿಳೆ ಆತ್ಮಹತ್ಯೆ : ಡೆತ್‌ನೋಟು ಪತ್ತೆ

ತನ್ನ ಮಕ್ಕಳಿಬ್ಬರನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಸಾವಿಗೆ ಮುನ್ನ ವಿಡಿಯೊ ಮೆಸೇಜ್‌ ಮಾಡಿರುವ ಮಹಿಳೆ, ಪತಿಯ ಕಿರುಕುಳದಿಂದ…

50 mins ago