ಕನ್ನಡದ ಕಿರುತೆರೆ ನಟ ಪವನ್ ರವೀಂದ್ರ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಿಶ್ಚಿತಾರ್ಥದ ಫೋಟೊಗಳನ್ನು ನಟ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ನಟ ಹಂಚಿಕೊಂಡ ಫೋಟೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ಅಭಿಮಾನಿಗಳು ಕಮೆಂಟ್ ಮೂಲಕ ಅಭಿನಂದನೆ ತಿಳಿಸುತ್ತಿದ್ದಾರೆ.

ಪವನ್​ ರವೀಂದ್ರ ಅವರು ರಂಗನಾಯಕಿ, ಕಾವ್ಯಾಂಜಲಿ, ನೀ ಇರಲು ಜೊತೆಯಲ್ಲಿ ಕನ್ನಡದ ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ. ಕನ್ನಡ, ತಮಿಳು, ತೆಲುಗು ಭಾಷೆಗಳಲ್ಲೂ ಮೋಡಿ ಮಾಡಿದ್ದಾರೆ.

ನಟ ಪವನ್​ ಅವರು ಆರತಿ ಸುಭಾಷ್ ಎಂಬುವವರ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇನ್ನು, ಆರತಿ ಸುಭಾಷ್‌ ಅವರು ಸಾಮಾಜಿಕ ಜಾಲತಾಣದ ಪ್ರಭಾವಿ (ಇನ್‌ಫ್ಲುಯೆನ್ಸರ್), ನಟಿ ಹಾಗೂ ರೂಪದರ್ಶಿಯಾಗಿ ಗುರುತಿಸಿಕೊಂಡಿದ್ದಾರೆ.

ಹಲವು ಕಿರುಚಿತ್ರಗಳಲ್ಲಿ ಅಭಿನಯಿಸಿರುವ ಅವರು, ‘ಪಾಂಡವರ್ ಇಲ್ಲಂ’ ಧಾರಾವಾಹಿಯ ಮೂಲಕ ಕಿರುತೆರೆಗೆ ಪದಾರ್ಪಣೆ ಮಾಡಿದರು. ಈ ಧಾರಾವಾಹಿಯಲ್ಲಿ ಮಲ್ಲಿಕಾ ಪಾತ್ರದಲ್ಲಿ ನಟಿಸುತ್ತಿದ್ದ ಅವರ ಅಭಿನಯಕ್ಕೆ ತಮಿಳು ಕಿರುತೆರೆ ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದರು.