ಮಲಯಾಳಂ ಸಿನಿಮಾ ರಂಗದಲ್ಲಿ ಸಂಚಲನ ಮೂಡಿಸಿರೋ ಜಸ್ಟಿಸ್ ಹೇಮಾ ವರದಿ ಒಬ್ಬೊಬ್ಬರ ತಲೆದಂಡಕ್ಕೆ ಕಾರಣವಾಗಿತ್ತು. ಈಗ ಮತ್ತೊಂದು ಹಂತ ತಲುಪಿದ್ದು, ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿದೆ. ಖ್ಯಾತ ನಟ ಹಾಗೂ ರಾಜಕಾರಣಿ ಮುಕೇಶ್ ಅವರನ್ನು ಬಂಧಿಸಲಾಗಿದೆ. ಕೊಚ್ಚಿಯ ಕೋಸ್ಟಲ್ ಪೊಲೀಸ್ ಆಫೀಸಿನಲ್ಲಿ ಮುಕೇಶ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು. ಎಐಜಿ ಪೂಂಗಾಝಾಲಿ ನೇತೃತ್ವದಲ್ಲಿ ನಡೆದ ವಿಚಾರಣೆಯ ನಂತರ ಮುಕೇಶ್ ಬಂಧನವಾಗಿದೆ.
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಪಡೆದಿರೋ ಮುಕೇಶ್ ಅವರ ಬಂಧನ ಹಲವು ಚರ್ಚೆಗೆ ಕಾರಣವಾಗಿದೆ. ಬಂಧಿಸಿ ನಂತರ ಬಿಡುಗಡೆ ಮಾಡುವ ಮಾಹಿತಿಯೂ ಇದೆ. ಒಟ್ಟಿನಲ್ಲಿ ಮುಕೇಶ್ ಬಂಧನ ಇತರರಲ್ಲಿ ಆತಂಕ ಸೃಷ್ಟಿ ಮಾಡಿದೆ.
Ad