ಕಾಪಿ ರೈಟ್ಸ್ ಉಲ್ಲಂಘನೆ ಆರೋಪ ಹೊತ್ತಿರೋ ನಟ ರಕ್ಷಿತ್ ಶೆಟ್ಟಿ ಗೆ ಬಂಧನದ ಭೀತಿ ಎದುರಾಗಿದೆ. ಹಾಗಾಗೇ ಅವರು ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ರಕ್ಷಿತ್ ಶೆಟ್ಟಿ ತಮ್ಮ ಸಿನಿಮಾಗೆ ಅನುಮತಿ ಇಲ್ಲದೇ ಎರಡು ಹಾಡುಗಳನ್ನು ಬಳಸಿದ್ದರು. ಹಾಗಾಗಿ ಯಶವಂತಪುರ ಪೊಲೀಸ್ ಠಾಣೆಯಲ್ಲಿ ರಕ್ಷಿತ್ ಶೆಟ್ಟಿ ಮತ್ತು ಅವರ ನಿರ್ಮಾಣ ಸಂಸ್ಥೆ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು.

ನಿರೀಕ್ಷಣಾ ಜಾಮೀನು ಕೋರಿ ರಕ್ಷಿತ್ ಶೆಟ್ಟಿ ಬೆಂಗಳೂರಿನ ಸೆಷನ್ಸ್ ಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇದೀಗ ರಕ್ಷಿತ್ ಶೆಟ್ಟಿ ನ್ಯಾಯಾಲಯ ಮೊರೆ ಹೋಗಿದ್ದಾರೆ. ರಕ್ಷಿತ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಲಾಗಿದ್ದು, ವಿಚಾರಣೆಯನ್ನು ಜುಲೈ 24 ಕ್ಕೆ ಸೆಷನ್ಸ್ ಕೋರ್ಟ್ ಮುಂದೂಡಿದೆ.