Bengaluru 25°C
Ad

ಪ್ರಮಾಣ ವಚನ ಸಮಾರಂಭದಲ್ಲಿ ಬಿಳಿ ಸೀರೆಯಲ್ಲಿ ಮಿಂಚಿದ ನಟಿ ಕಂಗನಾ ರಣಾವತ್ 

ನಿನ್ನೆ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ 2024ರ ಲೋಕಸಭಾ ಚುನಾವಣೆಯಲ್ಲಿ ಮಂಡಿ ಕ್ಷೇತ್ರದಿಂದ ಗೆದ್ದಿದ್ದ ಕಂಗನಾ ರಣಾವತ್  ಭಾಗಿಯಾಗಿದ್ದರು.

ಬೆಂಗಳೂರು: ನಿನ್ನೆ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ 2024ರ ಲೋಕಸಭಾ ಚುನಾವಣೆಯಲ್ಲಿ ಮಂಡಿ ಕ್ಷೇತ್ರದಿಂದ ಗೆದ್ದಿದ್ದ ಕಂಗನಾ ರಣಾವತ್  ಭಾಗಿಯಾಗಿದ್ದರು.

ಬಿಳಿ ಸೀರೆಯಲ್ಲಿ ನಟಿ ಕಂಗೊಳಿಸಿದ್ದಾರೆ. ಶಾರುಖ್ ಖಾನ್, ಅಕ್ಷಯ್ ಕುಮಾರ್, ವಿಕ್ರಾಂತ್ ಮಾಸ್ಸೆ, ಮತ್ತು ಅನುಪಮ್ ಖೇರ್ ಸೇರಿದಂತೆ ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಸಮಾರಂಭದಲ್ಲಿ ಭಾಗಿಯಾಗಿದ್ದರು.

ಕಂಗನಾ ರಣಾವತ್  ಅವರು 2024ರ ಲೋಕಸಭಾ ಚುನಾವಣೆಯಲ್ಲಿ ಮಂಡಿ ಕ್ಷೇತ್ರದಿಂದ ಗೆದ್ದಿದ್ದಾರೆ. ಪ್ರಮಾಣ ವಚನ ಸಮಾರಂಭದಲ್ಲಿ ಕಂಗನಾ ಭಾಗಿಯಾಗಿದ್ದರು. ಕಂಗನಾ ಸೀರೆಯಲ್ಲಿ ಮಿಂಚಿದ್ದಾರೆ.

ಸಮಾರಂಭದ ಕೇಂದ್ರ ಬಿಂದುವಿನಂತೆ ಬಿಟೌನ್‌ ಕ್ವೀನ್‌ ಕಂಗೊಳಿಸುತ್ತಿದ್ದರು. ಬಿಳಿ ಬಣ್ಣದ ಸೀರೆಯಲ್ಲಿ, ಮುತ್ತಿನ ನೆಕ್ಲೇಸ್‌ ಧರಿಸಿ ಕಂಗನಾ ಕಾಂತಿಯುತವಾಗಿ ಕಾಣಿಸಿಕೊಂಡಿದ್ದಾರೆ. ನಟಿಯ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ.

ಸ್ವತಃ ವಿಡಿಯೊ ಹಂಚಿಕೊಂಡಿರುವ ಕಂಗನಾ ‘ಪ್ರಮಾಣ ದಿನದಂದು ನನ್ನ ನೋಟ’ ಎಂದು ಶೀರ್ಷಿಕೆ ಬರೆದುಕೊಂಡಿದ್ದಾರೆ.

ಕಂಗನಾ ರಣಾವತ್ ಹಿಮಾಚಲ ಪ್ರದೇಶದ ಮಂಡಿಯಿಂದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಸ್ಪರ್ಧಿಸಿದ್ದರು. ನಟಿಯ ಮುಂದೆ ಕಾಂಗ್ರೆಸ್ ಪಕ್ಷದ ನಾಯಕ ವಿಕ್ರಮಾದಿತ್ಯ ಸಿಂಗ್ ಇದ್ದರು. ಕಂಗನಾ ಅವರನ್ನು 74,755 ಮತಗಳಿಂದ ಸೋಲಿಸಿದರು.

Ad
Ad
Nk Channel Final 21 09 2023
Ad