ಚೆನ್ನೈ: ಖ್ಯಾತ ಚಲನಚಿತ್ರ ನಿರ್ಮಾಪಕ ಮತ್ತು ದಕ್ಷಿಣ ಭಾರತದ ನಟಿ ಕೀರ್ತಿ ಸುರೇಶ್ ಅವರ ತಂದೆ ತಮ್ಮ ಮಗಳು ಫರ್ಹಾನ್ ಬಿನ್ ಲಿಯಾಕತ್ ಎಂಬ ವ್ಯಕ್ತಿಯೊಂದಿಗೆ ವಿವಾಹವಾಗಲಿದ್ದಾರೆ ಎಂಬ ವರದಿಗಳು ಸುಳ್ಳು ಎಂದು ಹೇಳಿದ್ದಾರೆ.
ಸುರೇಶ್ ಕುಮಾರ್ ಅವರು ಕೇರಳ ಬಿಜೆಪಿ ನಾಯಕಿ ಶೋಬಾ ಸುರೇಂದ್ರನ್ ಅವರ ಫೇಸ್ ಬುಕ್ ಪೇಜ್ ಮೂಲಕ ಹೇಳಿಕೆ ನೀಡಿದ್ದಾರೆ.
ಶೋಭಾ ಫೇಸ್ ಬುಕ್ನಲ್ಲಿ ಕೀರ್ತೀ ಸುರೇಶ್ ತಂದೆ ಸುರೇಶ್ ಕುಮಾರ್ ಹೀಗೆ ಹೇಳಿದ್ದಾರೆ. ನನ್ನ ಮಗಳು ಕೀರ್ತಿ ಸುರೇಶ್ ವ್ಯಕ್ತಿಯೊಬ್ಬರೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ. ಆತನನ್ನೆ ಮದುವೆಯಾಗುತ್ತಾರೆ ಎಂಬುದೆಲ್ಲ ಸುಳ್ಳು ಸುದ್ದಿ. ಇದೆಲ್ಲ ಆನ್ಲೈನ್ ನಲ್ಲಿ ವರದಿಗಳ ಕಿತಾಪತಿ ಎಂದು ಹೇಳಿದ್ದಾರೆ.
ನನ್ನ ಕುಟುಂಬದ ಸ್ನೇಹಿತನಾಗಿರುವ ಫರ್ಹಾನ್ ಅವರ ಹುಟ್ಟುಹಬ್ಬದಂದು, ಕೀರ್ತಿ ಫೋಟೋಗಳನ್ನು ಪೋಸ್ಟ್ ಮಾಡಿದ್ದರು. ಅದನ್ನೇ ಆಧರಿಸಿ ತಮಿಳು ಮ್ಯಾಗಜಿನ್ಗಳು ಕಪೋಲಕಲ್ಪಿತ ವರದಿಗಳನ್ನು ಪ್ರಕಟಿಸಿವೆ ಎಂದು ಹೇಳಿದ್ದಾರೆ. ಮುದುವೆಯ ಕುರಿತು ಹಲವರು ಕರೆ ಮಾಡಿ ವಿಚಾರಿಸುತ್ತಿದ್ದಾರೆ. ಇದರಿಂದ ನನ್ನ ಕುಟಂಬದ ನೆಮ್ಮದಿ ಹಾಳಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಕೀರ್ತಿ ಅವರ ಮದುವೆ ನಿಶ್ಚಯವಾದರೆ ಮಾಧ್ಯಮಗಳಿಗೆ ಹಾಗೂ ಸಾರ್ವಜನಿಕರಿಗೆ ಮೊದಲು ಮಾಹಿತಿ ನೀಡುವುದಾಗಿ ಸುರೇಶ್ ಹೇಳಿದ್ದಾರೆ. ಸುಳ್ಳು ಸುದ್ದಿಗಳನ್ನು ಹಬ್ಬಿಸಬೇಡಿ ಎಂದು ಜನರಿಗೆ ಕರೆ ನೀಡಿದ್ದಾರೆ. ಫರ್ಹಾನ್ ಕೀರ್ತಿ ಕುಟುಂಬದ ಸ್ನೇಹಿತರಾಗಿದ್ದು ಕೀರ್ತಿ ದುಬೈಗೆ ಭೇಟಿ ನೀಡಿದಾಗ ಅವರ ಜೊತೆಗಿದ್ದರು.
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ, ನಾಳೆ ಮೇ ಮೂರರಂದು ದಾವಣಗೆರೆಗೆ ಆಗಮಿಸುತ್ತಿದ್ದಾರೆ.
ದೇಶದ ಸ್ವಾತಂತ್ರ್ಯ ಚಳುವಳಿಯಲ್ಲಿ ಪ್ರಧಾನ ಪಾತ್ರ ವಹಿಸಿದ್ದ ಅಂದಿನ ಕಾರ್ಮಿಕ ವರ್ಗ ಇಂದು ಮತ್ತೆ ದೇಶವನ್ನು ಉಳಿಸಲು ಸನ್ನದ್ದವಾಗಬೇಕು.ಕಳೆದ 10…
ಪವಾಡ ಪುರುಷ ಮಲೆ ಮಹದೇಶ್ವರ ಕೋಟಿ ಒಡೆಯನಾಗಿ ಮುಂದುವರೆಯುತ್ತಿದ್ದು, ಇದೀಗ 34 ದಿನಗಳ ಅಂತರದಲ್ಲಿ ಮೂರು ಕೋಟಿ ನಾಲ್ಕು ಲಕ್ಷದ…
ಅಶ್ಲೀಲ ವೀಡಿಯೋ ಪ್ರಕರಣ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿದ್ದು, ಅವರಿಗೆ ಕ್ಲಿಯರೆನ್ಸ್ ಕೊಟ್ಟವರು ಯಾರು ಎಂಬುದರ…
ಉಡುಪಿ ಜಿಲ್ಲೆಯಾದ್ಯಂತ ಸಿ ಎನ್ ಜಿ ಬಂಕ್ ಗಳಲ್ಲಿ ಇಂಧನ ಕೊರತೆಯಿಂದ ರಿಕ್ಷಾ ಚಾಲಕರು ಗಂಟೆಗಟ್ಟಲೆ ಇಂಧನಕ್ಕಾಗಿ ಕಾಯುವ ಸನ್ನಿವೇಶ…
ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ ಮಾಡಿಸಿಕೊಟ್ಟಿರುವುದಕ್ಕಾಗಿ ನೇಹಾ ಹಿರೇಮಠ…