ಸ್ಯಾಂಡಲ್​ವುಡ್ ಸ್ಟಾರ್​ ಜೋಡಿ ಮಿಲನಾ ನಾಗರಾಜ್ ಮತ್ತು ಡಾರ್ಲಿಂಗ್ ಕೃಷ್ಣ ಅವರ ಕುಟುಂಬದಲ್ಲಿ ಸಂಭ್ರಮದ ಮನೆ ಮಾಡಿದೆ. ಇದೀಗ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸ್ಯಾಂಡಲ್​ವುಡ್ ನಟಿ ಮಿಲನಾ ನಾಗರಾಜ್ ಅವರ ಅದ್ಧೂರಿ ಸೀಮಂತ ಕಾರ್ಯಕ್ರಮ ಮಾಡಲಾಗಿದೆ.

ನಟಿ ಮಿಲನಾ ನಾಗರಾಜ್ ಅವರ ಸೀಮಂತ ಕಾರ್ಯಕ್ರಮದಲ್ಲಿ ಡಾರ್ಲಿಂಗ್ ಕೃಷ್ಣ, ಬಿಗ್​ಬಾಸ್​ ಬೆಡಗಿ ಸಂಗೀತಾ ಶೃಂಗೇರಿ ಹಾಗೂ ಸ್ಯಾಂಡಲ್​ವುಡ್​ ನಟ, ನಟಿಯರು, ಹಾಗೂ ಬಂಧು ಮಿತ್ರರು ಸಹ ಭಾಗಿಯಾಗಿದ್ದರು. ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿವೆ. ಫೋಟೋಸ್​ ನೋಡಿದ ಅಭಿಮಾನಿಗಳು ದಂಪತಿಗೆ ಶುಭ ಹಾರೈಸಿದ್ದಾರೆ.