News Karnataka Kannada
Sunday, May 05 2024
ಮನರಂಜನೆ

ಬಹಿರಂಗವಾಗಿ ಹೆಣ್ಣು ಮಕ್ಕಳನ್ನು ಅವಮಾನಿಸಿದ್ದಕ್ಕೆ ನಟಿ ಶ್ರುತಿಗೆ ಮಹಿಳಾ ಆಯೋಗದಿಂದ ನೋಟಿಸ್

ಕಾಂಗ್ರೆಸ್ ಸರ್ಕಾರ ಅನೇಕ ಗ್ಯಾರಂಟಿ ಯೋಜನೆಯಿಂದ ಹಾಗೂ ಫ್ರೀ ಬಸ್ ಯೋಜನೆಯಿಂದ ತೀರ್ಥಯಾತ್ರೆಗೆಂದು ಹೋಗುತ್ತೇವೆ ಎಂದು ಹೇಳಿ ಹೆಣ್ಣು ಮಕ್ಕಳು ಎಲ್ಲೆಲ್ಲೂ ಹೋಗುತ್ತಿರುತ್ತಾರೆ ಎಂದು ನಟಿ ಶ್ರುತಿ ಮಾತನಾಡಿರೋದು ಮಾಧ್ಯಮದಲ್ಲಿ ವರದಿಯಾಗಿದ್ದು, ಈ ವಿಷಯಕ್ಕೆ ಸಂಬಂಧಿಸಿದಂತೆ ಕಾರಣ ಕೇಳಿ ರಾಜ್ಯ ಮಹಿಳಾ ಆಯೋಗ ನಟಿ ಶ್ರುತಿ ಯವರಿಗೆ ನೋಟಿಸ್ ಜಾರಿ ಮಾಡಿದೆ.
Photo Credit : NewsKarnataka

ಕಾಂಗ್ರೆಸ್ ಸರ್ಕಾರ ಅನೇಕ ಗ್ಯಾರಂಟಿ ಯೋಜನೆಯಿಂದ ಹಾಗೂ ಫ್ರೀ ಬಸ್ ಯೋಜನೆಯಿಂದ ತೀರ್ಥಯಾತ್ರೆಗೆಂದು ಹೋಗುತ್ತೇವೆ ಎಂದು ಹೇಳಿ ಹೆಣ್ಣು ಮಕ್ಕಳು ಎಲ್ಲೆಲ್ಲೂ ಹೋಗುತ್ತಿರುತ್ತಾರೆ ಎಂದು ನಟಿ ಶ್ರುತಿ ಮಾತನಾಡಿರೋದು ಮಾಧ್ಯಮದಲ್ಲಿ ವರದಿಯಾಗಿದ್ದು, ಈ ವಿಷಯಕ್ಕೆ ಸಂಬಂಧಿಸಿದಂತೆ ಕಾರಣ ಕೇಳಿ ರಾಜ್ಯ ಮಹಿಳಾ ಆಯೋಗ ನಟಿ ಶ್ರುತಿ ಯವರಿಗೆ ನೋಟಿಸ್ ಜಾರಿಗೊಳಿಸಿದೆ.

ನಟಿ ಶ್ರುತಿಗೆ ಕೊಟ್ಟಿರುವ ನೋಟಿಸ್ ನಲ್ಲಿ ಈ ರೀತಿ ಬಹಿರಂಗವಾಗಿ ಹೆಣ್ಣು ಮಕ್ಕಳನ್ನು ಅವಮಾನಿಸಿರೋದು ಖಂಡನೀಯ. ರಾಜ್ಯ ಮಹಿಳಾ ಆಯೋಗದ ಅಧಿನಿಯಮ 1995 ಪರಿಚಯ 10(ಎ)ಮೇರೆಗೆ ನೋಟಿಸ್ ಜಾರಿ ಮಾಡಿದೆ. ಏಳು‌ ದಿನದಲ್ಲಿ ಸ್ಪಷ್ಟೀಕರಣ ನೀಡುವಂತೆ ಸೂಚನೆ ನೀಡಲಾಗಿದೆ.

ಉಡುಪಿ ಜಿಲ್ಲೆಯ ಬಂದೂರಿನಲ್ಲಿ ನಡೆದ ಚುನಾವಣಾ ಭಾಷಣದ ಅಬ್ಬರದಲ್ಲಿ ಮಹಿಳೆಯರನ್ನು ಶ್ರುತಿ ಟೀಕಿಸಿದ್ದಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಪರ ವಿರೋಧ ಚರ್ಚೆ ನಡೆದಿತ್ತು. ಅವರು ಮಾಡಿದ ಭಾಷಣದ ತುಣುಕು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಕೂಡ ಆಗಿತ್ತು. ನಂತರ ಮಹಿಳಾ ಆಯೋಗ ನೋಟಿಸ್ ನೀಡಿ, ಸ್ಪಷ್ಟೀಕರಣ ಕೇಳಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು