ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ಪರ್ಧಿ ಶುಭಾ ಪೂಂಜಾ ಅವರ ವೈವಾಹಿಕ ಜೀವನದಲ್ಲಿ ಬಿರುಗಾಳಿ ಎದ್ದಿದ್ದು, ಮದುವೆಯಾಗಿ ನಾಲ್ಕೇ ವರ್ಷಕ್ಕೆ ನಟಿ ಶುಭಾ ಪೂಂಜಾ ಹಾಗೂ ಅವರ ಪತಿ ಸುಮಂತ್ ಬಿಲ್ಲವ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ್ದಾರೆ.
ಇವರಿಬ್ಬರು ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ಪ್ರಕ್ರಿಯೆಯ ಭಾಗವಾಗಿ ಇಂದು ಅಥವಾ ಮುಂದಿನ ವಿಚಾರಣೆಯ ದಿನದಂದು ಶುಭಾ ಪೂಂಜಾ ಮತ್ತು ಸುಮಂತ್ ಬಿಲ್ಲವ ಫ್ಯಾಮಿಲಿ ಕೋರ್ಟ್‌ನಲ್ಲಿ ವಿಚಾರಣೆಗೆ ಖುದ್ದಾಗಿ ಹಾಜರಾಗುವ ಸಾಧ್ಯತೆಯಿದೆ.

