ಉಡುಪಿ: ಉಡುಪಿ ಶ್ರೀಕೃಷ್ಣಮಠಕ್ಕೆ ಇಂದು ಹಿರಿಯ ಕನ್ನಡ ಚಲನಚಿತ್ರ ನಟಿ ತಾರಾ ಅನುರಾಧಾ ಅವರು ಭೇಟಿ ನೀಡಿ ದೇವರ ದರ್ಶನ ಪಡೆದರು.

ಬಳಿಕ ಪರ್ಯಾಯ ಶೀರೂರು ಮಠಾಧೀಶರಾದ ವೇದವರ್ಧನತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಕ್ಷತೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಠದ ಮೋಹನ್ ಭಟ್ ಇದ್ದರು.