ಬಾಲಿವುಡ್

ಕ್ಷಮೆ ಯಾಚಿಸಿದ ಆದಿಪುರುಷ್ ಸಂಭಾಷಣೆಕಾರ: ಸಂಬಳ ದಾನ ಮಾಡಿ ಎಂದ ನೆಟ್ಟಿಗರು

ಬಹಳ ನಿರೀಕ್ಷೆ ಮೂಡಿಸಿದ್ದ ಆದಿಪುರುಷ್ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಮಕಾಡೆ ಮಲಗಿದೆ. ಗಳಿಕೆಯಲ್ಲಿ ವಿಫಲವಾಗಿರುವುದು ಮಾತ್ರವೇ ಅಲ್ಲದೆ ಪ್ರೇಕ್ಷಕರ ನಿಂದನೆಗೂ ಕಾರಣವಾಗಿದೆ. ಆದಿಪುರುಷ್ ಸಿನಿಮಾ ಹಿಂದೂಗಳ ಭಾವನೆಗೆ ಧಕ್ಕೆ ಉಂಟು ಮಾಡಿದೆ ಎಂದು ಹಲವರು ಆರೋಪಿಸಿದ್ದು ಸಿನಿಮಾದ ವಿರುದ್ಧ ಹಲವು ದೂರುಗಳು ದಾಖಲಾಗಿವೆ. ಅದರಲ್ಲಿಯೂ ಸಿನಿಮಾದ ಕೆಲವು ಸಂಭಾಷಣೆಗಳ ವಿರುದ್ಧ ತೀವ್ರ ಆಕ್ಷೇಪ ಸಹ ವ್ಯಕ್ತವಾಗಿದೆ. ಇದೀಗ ಆದಿಪುರುಷ್ ಸಿನಿಮಾದ ಸಂಭಾಷಣೆಕಾರ ಮನೋಜ್ ಮುಂತಶೀರ್ ಶುಕ್ಲಾ ಪ್ರೇಕ್ಷಕರ ಬೇಷರತ್ ಕ್ಷಮೆಯಾಚಿಸಿದ್ದಾರೆ.

ಆದಿಪುರುಷನಿಂದ ಜನರ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ನಾನು ಒಪ್ಪಿಕೊಳ್ಳುತ್ತೇನೆ. ಜೋಡಿಸಿದ ಕೈಗಳಿಂದ, ನಾನು ನನ್ನ ಬೇಷರತ್ ಕ್ಷಮೆಯಾಚಿಸುತ್ತೇನೆ. ಪ್ರಭು ಭಜರಂಗ ಬಲಿ ನಮ್ಮನ್ನು ಒಗ್ಗೂಡಿಸಲಿ ಮತ್ತು ನಮ್ಮ ಪವಿತ್ರ ಸನಾತನ ಮತ್ತು ನಮ್ಮ ಮಹಾನ್ ರಾಷ್ಟ್ರದ ಸೇವೆ ಮಾಡಲು ನಮಗೆ ಶಕ್ತಿಯನ್ನು ನೀಡಲಿ” ಎಂದು ಮನೋಜ್ ಮುಂತಶೀರ್ ಶುಕ್ಲಾ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

https://twitter.com/manojmuntashir/status/1677504640009781250?ref_src=twsrc%5Etfw%7Ctwcamp%5Etweetembed%7Ctwterm%5E1677504640009781250%7Ctwgr%5Ed72fc11e87705cfadd40936d9e57c2381c7cd97e%7Ctwcon%5Es1_&ref_url=https%3A%2F%2Ftv9kannada.com%2Fentertainment%2Fbollywood%2Fpeople-not-ready-to-accept-adipurush-writer-manoj-muntashirs-apology-for-this-reason-mdn-618928.html

ಆದರೆ ಅದನ್ನು ಒಂದು ವರ್ಗದ ಜನರು ಒಪ್ಪಿಕೊಂಡಿಲ್ಲ. ಮನೋಜ್ ಮುಂತಶೀರ್ ಶುಕ್ಲಾ ‘ಆದಿಪುರುಷ್​’ ಚಿತ್ರದಿಂದ ಪಡೆದ ಸಂಭಾವನೆಯನ್ನು ಗೋಶಾಲೆ ಮತ್ತು ದೇವಸ್ಥಾನಕ್ಕೆ ದಾನ ನೀಡಬೇಕು ಎಂದು ಕೂಡ ಅನೇಕರು ಕಮೆಂಟ್​ ಮಾಡಿದ್ದಾರೆ.

 

Ashitha S

Recent Posts

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

4 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

33 mins ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

49 mins ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

1 hour ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

1 hour ago

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

2 hours ago