ಮುಂಬೈ: ಇತ್ತೀಚೆಗೆ ನಟಿ ಐಶ್ವರ್ಯಾ ರೈ ಬಚ್ಚನ್ ಹಾಗೂ ಅಭಿಷೇಕ್ ಬಚ್ಚನ್ ವಿಚ್ಛೇದನ ಪಡೆಯುತ್ತಾರೆ ಎಂದು ವದಂತಿ ಹರಡಿತ್ತು. ಅದಕ್ಕೆ ಪೂರಕವಾಗಿ ಹಲವು ಘಟನೆಗಳು ನಡೆದಿವೆ. ಆದರೆ ಈಗ ಬಚ್ಚನ್ ಕುಟುಂಬದ ಎಲ್ಲರೂ ಒಟ್ಟಾಗಿ ಕಾಣಿಸಿಕೊಂಡಿದ್ದು, ವದಂತಿಗಳಿಗೆ ನಾಂದಿ ಹಾಡಿದ್ದಾರೆ. ಅಭಿಷೇಕ್ ಹಾಗೂ ಐಶ್ವರ್ಯಾ ಒಟ್ಟಿಗೆ ಕಾಣಿಸಿಕೊಂಡ ಬಳಿಕ ಅವರ ಅಭಿಮಾನಿಗಳು ಫುಲ್ ಖುಷಿಪಟ್ಟಿದ್ದಾರೆ.
ಮುಂಬೈನಲ್ಲಿರುವ ಧೀರೂಬಾಯಿ ಅಂಬಾನಿ ಇಂಟರ್ನ್ಯಾಷನಲ್ ಸ್ಕೂಲ್ನಲ್ಲಿ ಬಚ್ಚನ್ ಕುಟುಂಬದ ಕುಡಿ ಆರಾಧ್ಯಾ ಶಿಕ್ಷಣ ಪಡೆಯುತ್ತಿದ್ದಾಳೆ. ಅವಳ ಶಾಲೆಯಲ್ಲಿ ಶುಕ್ರವಾರ (ಡಿಸೆಂಬರ್ 15) ನಡೆದ ಕಾರ್ಯಕ್ರಮಕ್ಕೆ ಐಶ್ವರ್ಯಾ, ಅಭಿಷೇಕ್, ಅಮಿತಾಭ್, ಅಗಸ್ತ್ಯ ನಂದ ಆಗಮಿಸಿದ್ದರು. ಈ ಕಾರ್ಯಕ್ರಮದ ವಿಡಿಯೋನ ಪಾಪರಾಜಿಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಐಶ್ವರ್ಯಾ ಅವರು ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ.
https://www.instagram.com/snehzala/?utm_source=ig_embed&ig_rid=b3a51a8a-b67b-4ce4-aeb2-f47176afe8a8