Categories: ಮನರಂಜನೆ

‘ಸಂಘಿ’ ಶಬ್ದ ಕೆಟ್ಟದ್ದು ಎಂದು ಐಶ್ವರ್ಯ ಹೇಳಿಲ್ಲ: ಮಗಳ ಪರ ರಜನಿಕಾಂತ್ ಬ್ಯಾಟಿಂಗ್

ಚೆನ್ನೈ: “ನನ್ನ ಮಗಳು ಸಂಘಿ ಎನ್ನುವುದು ಕೆಟ್ಟ ಶಬ್ದ ಎಂದು ಎಂದಿಗೂ ಹೇಳಿಲ್ಲ. ನನ್ನ ತಂದೆಯನ್ನು ಏಕೆ ಬ್ರ್ಯಾಂಡ್ ಮಾಡುತ್ತೀರಿ ಎಂದಷ್ಟೇ ಕೇಳಿದ್ದಾರೆ” ಎಂದು ಸೂಪರ್​ ಸ್ಟಾರ್ ರಜನಿಕಾಂತ್ ಸ್ಪಷ್ಟನೆ ನೀಡಿದ್ದಾರೆ. ರಜನಿಕಾಂತ್ ಅವರು ತಮ್ಮ ಮುಂಬರುವ ಚಿತ್ರ ʻಲಾಲ್ ಸಲಾಮ್‌ʼ ಸಿನಿಮಾ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಮಗಳು ಐಶ್ವರ್ಯಾ ರಜನಿಕಾಂತ್ ಅವರ ಇತ್ತೀಚಿನ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.‌

ಇಂದು, ಚೆನ್ನೈ ವಿಮಾನ ನಿಲ್ದಾಣದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ರಜನಿಕಾಂತ್ ಅವರು, ಆಡಿಯೋ ಲಾಂಚ್‌ ವೇಳೆ ಮಾತನಾಡಿದ ಐಶ್ವರ್ಯಾ ಅವರ ಹೇಳಿಕೆಯನ್ನು ರಜಿನಿಕಾಂತ್‌ ಸಮರ್ಥಿಸಿಕೊಂಡಿದ್ದಾರೆ. ‘ನನ್ನ ಮಗಳು ʻಸಂಘಿʼ ಎನ್ನುವುದು ಕೆಟ್ಟ ಶಬ್ದ ಎಂದು ಎಂದಿಗೂ ಹೇಳಿಲ್ಲ. ನನ್ನ ತಂದೆಯನ್ನು ಏಕೆ ಬ್ರ್ಯಾಂಡ್ ಮಾಡುತ್ತೀರಿ ಎಂದಷ್ಟೇ ಕೇಳಿದ್ದಾರೆ ಎಂದಿದ್ದಾರೆ.

ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಐಶ್ವರ್ಯ, ನಾನು ಸಾಮಾನ್ಯವಾಗಿ ಸೋಷಿಯಲ್ ಮೀಡಿಯಾದಿಂದ ದೂರ ಇರುತ್ತೇನೆ. ಆದರೆ ನನ್ನ ತಂಡ ಹೊರಗಡೆ ಏನಾಗುತ್ತಿದೆ ಎಂದು ಅಪ್‌ಡೇಟ್‌ ಮಾಡುತ್ತಲೇ ಇರುತ್ತಾರೆ. ಕೆಲವು ಪೋಸ್ಟ್‌ಗಳನ್ನು ತೋರಿಸುತ್ತಲೇ ಇರುತ್ತಾರೆ. ಅವುಗಳನ್ನು ನೋಡಿ ನನಗೆ ಕೋಪ ಬರುತ್ತಿತ್ತು. ನಾವೂ ಮನುಷ್ಯರು. ಇತ್ತೀಚಿನ ದಿನಗಳಲ್ಲಿ, ಅನೇಕ ಜನರು ನನ್ನ ತಂದೆ ʻಸಂಘಿʼ ಎಂದು ಕರೆದಿದ್ದಾರೆ.

ಇನ್ನು ಅದರ ಅರ್ಥವೇನೆಂದು ನನಗೆ ತಿಳಿದಿರಲಿಲ್ಲ, ನಂತರ ನಾನು ʻಸಂಘಿʼ ಪದದ ಅರ್ಥ ತಿಳಿದಾಗ, ನಿರ್ದಿಷ್ಟ ರಾಜಕೀಯ ಪಕ್ಷವನ್ನು ಬೆಂಬಲಿಸುವ ಜನರನ್ನು ಸಂಘಿ ಎಂದು ಕರೆಯುತ್ತಾರೆ ಎಂದು ಹೇಳಿದರು. ಅಷ್ಟೇ ಅಲ್ಲದೇ ʻಸಂಘಿʼ ಆಗಿದ್ದರೆ ಲಾಲ್ ಸಲಾಂ ಅಂಥ ಸಿನಿಮಾ ಮಾಡುತ್ತಿರಲಿಲ್ಲ’ ಎಂದಿದ್ದರು. ಮಗಳ ಹೇಳಿಕೆ ಕೇಳಿ ರಜನಿಕಾಂತ್ ಅವರು ಕಣ್ಣೀರು ಹಾಕಿದ್ದರು. ಈ ವಿಡಿಯೋ ವೈರಲ್ ಆಗಿತ್ತು.

Ashitha S

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

3 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

4 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

4 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

4 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

5 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

5 hours ago