ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಕೆಲವು ಬಾಲಿವುಡ್ ಸೆಲೆಬ್ರಿಟಿಗಳು ಆಗಮಿಸಿದ್ದರು. ಈ ವೇಳೆ ಅಕ್ಷಯ್ ಕುಮಾರ್ ಮತ್ತು ಶಾರುಖ್ ಖಾನ್ ಅವರು ಆತ್ಮೀಯವಾಗಿ ತಬ್ಬಿಕೊಂಡಿದ್ದಾರೆ.
ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.
ಶಾರುಖ್ ಖಾನ್ ಅವರು ಮುಖೇಶ್ ಅಂಬಾನಿ ಮತ್ತು ಅನಂತ್ ಅಂಬಾನಿ ಅವರ ಜೊತೆ ಆಗಮಿಸಿದರು. ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರವನ್ನು ನೋಡಲು ಬಂದಿದ್ದ ಅಕ್ಷಯ್ ಕುಮಾರ್ ಹಾಗೂ ಶಾರುಖ್ ಖಾನ್ ಅವರು ಪರಸ್ಪರ ಭೇಟಿಯಾದರು. ಅವರಿಬ್ಬರು ತಬ್ಬಿಕೊಂಡ ಕ್ಷಣವನ್ನು ಅತ್ಯುತ್ತಮ ಕ್ಷಣ ಎಂದು ಅಭಿಮಾನಿಗಳು ಬಣ್ಣಿಸುತ್ತಿದ್ದಾರೆ.
ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸುವುದನ್ನು ನೋಡಲು ಹಲವು ಗಣ್ಯರಿಗೆ ಆಹ್ವಾನ ನೀಡಲಾಗಿತ್ತು. ವಿವಿಧ ದೇಶಗಳ ಪ್ರಮುಖರು ಬಂದು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಚಿತ್ರರಂಗದ ಸೆಲೆಬ್ರಿಟಿಗಳಾದ ಅಕ್ಷಯ್ ಕುಮಾರ್, ಶಾರುಖ್ ಖಾನ್, ಅನುಪಮ್ ಖೇರ್, ರಾಜ್ಕುಮಾರ್ ಹಿರಾನಿ, ವಿಕ್ರಾಂತ್ ಮಾಸಿ, ರಜನಿಕಾಂತ್ ಅವರು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾದರು.
Delhi | Actors Shah Rukh Khan and Akshay Kumar greet each other as they arrive to attend the oath ceremony of PM-designate Narendra Modi at Rashtrapati Bhavan pic.twitter.com/A6jhJBsI9K
— ANI (@ANI) June 9, 2024

