Bengaluru 23°C
Ad

ಮೋದಿ ಪ್ರಮಾಣ ವಚನ ಸ್ವೀಕಾರದ ವೇಳೆ ಪರಸ್ಪರ ತಬ್ಬಿಕೊಂಡ ಅಕ್ಷಯ್, ಶಾರುಖ್​ ಖಾನ್

ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿ  ಅವರು ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಕೆಲವು ಬಾಲಿವುಡ್​ ಸೆಲೆಬ್ರಿಟಿಗಳು ಆಗಮಿಸಿದ್ದರು. ಈ ವೇಳೆ ಅಕ್ಷಯ್​ ಕುಮಾರ್​ ಮತ್ತು ಶಾರುಖ್​ ಖಾನ್​  ಅವರು ಆತ್ಮೀಯವಾಗಿ ತಬ್ಬಿಕೊಂಡಿದ್ದಾರೆ.

ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿ  ಅವರು ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಕೆಲವು ಬಾಲಿವುಡ್​ ಸೆಲೆಬ್ರಿಟಿಗಳು ಆಗಮಿಸಿದ್ದರು. ಈ ವೇಳೆ ಅಕ್ಷಯ್​ ಕುಮಾರ್​ ಮತ್ತು ಶಾರುಖ್​ ಖಾನ್​  ಅವರು ಆತ್ಮೀಯವಾಗಿ ತಬ್ಬಿಕೊಂಡಿದ್ದಾರೆ.

ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್​ ವೈರಲ್​ ಆಗಿದೆ.

ಶಾರುಖ್​ ಖಾನ್​ ಅವರು ಮುಖೇಶ್​ ಅಂಬಾನಿ ಮತ್ತು ಅನಂತ್​ ಅಂಬಾನಿ ಅವರ ಜೊತೆ ಆಗಮಿಸಿದರು. ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರವನ್ನು ನೋಡಲು ಬಂದಿದ್ದ ಅಕ್ಷಯ್​ ಕುಮಾರ್​ ಹಾಗೂ ಶಾರುಖ್​ ಖಾನ್​ ಅವರು ಪರಸ್ಪರ ಭೇಟಿಯಾದರು. ಅವರಿಬ್ಬರು ತಬ್ಬಿಕೊಂಡ ಕ್ಷಣವನ್ನು ಅತ್ಯುತ್ತಮ ಕ್ಷಣ ಎಂದು ಅಭಿಮಾನಿಗಳು ಬಣ್ಣಿಸುತ್ತಿದ್ದಾರೆ.

ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸುವುದನ್ನು ನೋಡಲು ಹಲವು ಗಣ್ಯರಿಗೆ ಆಹ್ವಾನ ನೀಡಲಾಗಿತ್ತು. ವಿವಿಧ ದೇಶಗಳ ಪ್ರಮುಖರು ಬಂದು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಚಿತ್ರರಂಗದ ಸೆಲೆಬ್ರಿಟಿಗಳಾದ ಅಕ್ಷಯ್​ ಕುಮಾರ್​, ಶಾರುಖ್​ ಖಾನ್​, ಅನುಪಮ್​ ಖೇರ್​, ರಾಜ್​ಕುಮಾರ್​ ಹಿರಾನಿ, ವಿಕ್ರಾಂತ್​ ಮಾಸಿ, ರಜನಿಕಾಂತ್​ ಅವರು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾದರು.

Ad
Ad
Nk Channel Final 21 09 2023
Ad