ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಅರೆಸ್ಟ್ ಆಗಿದ್ದ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ಗೆ ತೆಲಂಗಾಣ ಹೈಕೋರ್ಟ್ ಇಂದು (ಅ.24) ಜಾಮೀನು ಮಂಜೂರು ಮಾಡಿದೆ.

ಸಹ ಕೊರಿಯೋಗ್ರಾಫರ್ ಮೇಲೆ ಲೈಂಗಿಕ ದೌರ್ಜನ್ಯಎಸಗಿದ ಆರೋಪದ ಮೇಲೆ ಜಾನಿ ಮಾಸ್ಟರ್ ಅವರನ್ನು ಕಳೆದ ತಿಂಗಳು ಸೆಪ್ಟೆಂಬರ್‌ನಲ್ಲಿ ಹೈದರಾಬಾದ್ ಪೊಲೀಸರು ಬಂಧಿಸಿದ್ದರು. ಜಾನಿ ಮಾಸ್ಟರ್ ವಿರುದ್ಧ ಹೈದರಾಬಾದ್‌ನಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು.

ಆತ ತನ್ನ ಮೇಲೆ ಅತ್ಯಾಚಾರ ಎಸಗಿ, ಬೆದರಿಕೆ ಹಾಕಿ ದೈಹಿಕ ಹಲ್ಲೆ ನಡೆಸಿದ್ದಾನೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದರು. ಈ ಪ್ರಕರಣದ ಸಂಬಂಧ ಇಂದು (ಅ.24) ಜಾನಿ ಮಾಸ್ಟರ್‌ಗೆ ಜಾಮೀನು ಸಿಕ್ಕಿದೆ.