ʻಕಾಂತಾರʼ ಚಾವುಂಡಿ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್‌ ನಟ ರಣವೀರ್ ಸಿಂಗ್ ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ, ತಾಯಿಯೆದುರು ಕ್ಷಮೆಯಾಚಿಸಿದ್ದಾರೆ.

ಈ ಪ್ರಕರಣ ಸಂಬಂಧ ಹೈಕೋರ್ಟ್ ವಿಚಾರಣೆ ನಡೆಸುತ್ತಿದ್ದಾಗ, ರಣವೀರ್ ಸಿಂಗ್ ಸ್ವತಃ ಎಕ್ಸ್‌ನಲ್ಲಿ ಕ್ಷಮೆ ಕೇಳಿದ್ದರು. ಜೊತೆಗೆ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ, ಕ್ಷಮೆ ಕೇಳುವುದಾಗಿ ತಿಳಿಸಿದ್ದರು.

ಗೋವಾ ಫಿಲ್ಮೋತ್ಸವ ಕಾರ್ಯಕ್ರಮದಲ್ಲಿ ರಣವೀರ್‌ ಸಿಂಗ್‌ ಮಾತನಾಡಿ, ರಿಷಬ್ ಅವರ ಕಾಂತಾರ ಸಿನಿಮಾವನ್ನ ಥಿಯೇಟರ್‌ನಲ್ಲಿ ನಾನು ನೋಡಿದೆ. ಅದ್ಭುತವಾಗಿತ್ತು ನಿಮ್ಮ ನಟನೆ. ಅದರಲ್ಲೂ ಹೆಣ್ಣು ದೆವ್ವ ನಿಮ್ಮ ಮೈಸೇರುವ ದೃಶ್ಯವಂತೂ ಅತ್ಯದ್ಭುತವಾಗಿತ್ತು. ಆ ದೃಶ್ಯದಲ್ಲಿ ನಿಮ್ಮ ನಟನೆ ಹಾಗೂ ನಿಮ್ಮ ನೋಟ ಮಜವಾಗಿತ್ತು ಅಂತ ರಣವೀರ್‌ ಸಿಂಗ್‌ ಅನುಕರಣೆ ಮಾಡಿದ್ದರು.