ಮುಂಬೈ: ಬಾಲಿವುಡ್ ಖ್ಯಾತ ನಿರ್ದೇಶಕಿ ಫರಾ ಖಾನ್ ಮತ್ತು ನಿರ್ದೇಶಕ ಸಾಜಿದ್ ಖಾನ್ ಅವರ ತಾಯಿ ನಿಧನರಾಗಿದ್ದಾರೆ. 79 ವಯಸ್ಸಿನ ಮೇನಕಾ ಇರಾನಿ ಅವರು ಮುಂಬೈನಲ್ಲಿ ಮೃತಪಟ್ಟಿದ್ದಾರೆ. ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ನಿರ್ದೇಶಕಿ ಫರಾ ಖಾನ್ ಅವರು ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಬಹಿರಂಗಪಡಿಸಿದ ಕೆಲವು ದಿನಗಳ ನಂತರ ಮೇನಕಾ ಇರಾನಿ ನಿಧನರಾಗಿದ್ದಾರೆ.
ಮಾಹಿತಿ ಪ್ರಕಾರ, ಮೇನಕಾ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರಂತೆ. ಆದರೆ ಇಂದು ಮುಂಬೈನಲ್ಲಿ ನಿಧನರಾಗಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸುತ್ತಿದ್ದಾರೆ.

