News Karnataka Kannada
Saturday, May 04 2024
ಮನರಂಜನೆ

ಅದ್ಧೂರಿಯಾಗಿ ನೆರವೇರಿದ ಅರ್ಜುನ್ ಸರ್ಜಾ ಪುತ್ರಿ ನಿಶ್ಚಿತಾರ್ಥ: ವರ ಯಾರು ಗೊತ್ತ?

Arjun Sarja's daughter gets engaged in a grand ceremony?
Photo Credit : News Kannada

ಚೈನ್ನೈ: ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಸರ್ಜಾ ಅವರ ನಿಶ್ಚಿತಾರ್ಥ ಇಂದು (ಅ.27) ಚೆನ್ನೈನಲ್ಲಿ ಅದ್ಧೂರಿಯಾಗಿ ನೆರವೇರಿದೆ. ಅದ್ಧೂರಿಯಾಗಿ ನೆರವೇರಿದ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಧ್ರುವ ಸರ್ಜಾ ಸೇರಿದಂತೆ ಸರ್ಜಾ ಕುಟುಂಬದ ಸದಸ್ಯರು ಭಾಗಿಯಾಗಿದ್ದರು. ಐಶ್ವರ್ಯಾ ಸರ್ಜಾ ಅವರು ತಮ್ಮ ಬಹು ಸಮಯದ ಗೆಳೆಯನನ್ನೇ ವರಿಸಲಿದ್ದು, ಅವರೊಟ್ಟಿಗೆ ವಿವಾಹ ನಿಶ್ಚಯ ಮಾಡಿಕೊಂಡಿದ್ದಾರೆ.

ಐಶ್ವರ್ಯಾ ಅವರ ನಿಶ್ಚಿತಾರ್ಥವು ತಮಿಳಿನ ಜನಪ್ರಿಯ ನಟ ತಂಬಿ ರಾಮಯ್ಯ ಅವರ ಪುತ್ರ ಉಮಾಪತಿ ರಾಮಯ್ಯ ಅವರೊಡನೆ ನಡೆದಿದೆ. ತಂಬಿ ರಾಮಯ್ಯ ತಮಿಳು ಚಿತ್ರರಂಗದ ಜನಪ್ರಿಯ ಹಾಸ್ಯ ನಟ ಮತ್ತು ಪೋಷಕ ನಟ. ಹಲವು ವರ್ಷಗಳಿಂದಲೂ ತಂಬಿ ರಾಮಯ್ಯ ತಮಿಳು ಸಿನಿಮಾಗಳಲ್ಲಿ ನಟಿಸುತ್ತಾ ಬಂದಿದ್ದಾರೆ. ಉಮಾಪತಿ ರಾಮಯ್ಯ ಹಾಗೂ ಐಶ್ವರ್ಯಾ ಸರ್ಜಾ ಹಲವು ವರ್ಷಗಳಿಂದಲೂ ಪ್ರೀತಿಯಲ್ಲಿದ್ದರು ಎನ್ನಲಾಗಿದೆ. ಇದೀಗ ಹಿರಿಯರ ಒಪ್ಪಿಗೆ ಪಡೆದು ವಿವಾಹ ಮಾಡಿಕೊಳ್ಳಲು ಸಜ್ಜಾಗಿದ್ದು ಇಂದು ಕುಟುಂಬದ ಹಿರಿಯರ ಸಮ್ಮುಖದಲ್ಲಿ ಉಂಗುರ ಬದಲಾಯಿಸಿಕೊಂಡಿದ್ದಾರೆ. ಸದ್ಯ ಇದರ ಫೋಟೊ ವೈರಲ್‌ ಆಗ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 4 / 5. Vote count: 3

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು