ಬಾಲಿವುಡ್ನ ಸ್ಟಾರ್ ನಟ ಸಲ್ಮಾನ್ ಖಾನ್ ಅವರಿಗೆ ಬೆದರಿಕೆ ಹಾಕಿದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.ಸಲ್ಮಾನ್ ಖಾನ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿ, ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ 25 ವರ್ಷ ವಯಸ್ಸಿನ ಯುವಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಆ ಮೂಲಕ ಟ್ರೋಲ್ ಮಾಡುವವರಿಗೆ, ಬೆದರಿಕೆ ಹಾಕುವವರಿಗೆ ಎಚ್ಚರಿಕೆ ಸಂದೇಶ ರವಾನಿಸಲಾಗಿದೆ.
ಯೂಟ್ಯೂಬ್ ಮೂಲಕ ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಹಾಕಿದ ವ್ಯಕ್ತಿ ಕೂಡ ತನ್ನ ವಿಡಿಯೋದಲ್ಲಿ ಈ ಹಿಂದೆ ಅಟ್ಯಾಕ್ ಮಾಡಿದ್ದ ಬಿಷ್ಣೋಯ್ ಗ್ಯಾಂಗ್ ಬಗ್ಗೆ ಉಲ್ಲೇಖಿಸಿದ್ದಾನೆ ಎಂದು ವರದಿ ಆಗಿದೆ.
ಯೂಟ್ಯೂಬ್ ಮೂಲಕ ಸಲ್ಮಾನ್ ಖಾನ್ಗೆ ಬೆದರಿಕೆ ಹಾಕಿದ ಯುವಕ ರಾಜಸ್ಥಾನ ಮೂಲದವನು. ಬನ್ವರ್ಲಾಲ್ ಲತುರ್ಲಾಲ್ ಗುಜ್ಜರ್ ಎಂದು ಆತನನ್ನು ಗುರುತಿಸಲಾಗಿದೆ. ಗ್ರಾಮೀಣ ಭಾಗದ ಯುವಕನಾದ ಆತ ತನ್ನ ಯೂಟ್ಯೂಬ್ ಚಾನೆಲ್ ಮೂಲಕ ಸ್ಟಾರ್ ನಟನಿಗೆ ಬೆದರಿಕೆ ಹಾಕಿದ್ದಾನೆ. ಮುಂಬೈ ಸೈಬರ್ ಪೊಲೀಸರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು, ರಾಜಸ್ಥಾನಕ್ಕೆ ತೆರಳಿ ಆತನನ್ನು ಅರೆಸ್ಟ್ ಮಾಡಿದ್ದಾರೆ.