Ad

ಯೂಟ್ಯೂಬ್​ನಲ್ಲಿ ಸಲ್ಮಾನ್​​ಗೆ ಕೊಲೆ ಬೆದರಿಕೆ ಹಾಕಿದ್ದ ಯುವಕನ ಬಂಧನ

ಬಾಲಿವುಡ್​ನ ಸ್ಟಾರ್​ ನಟ ಸಲ್ಮಾನ್​ ಖಾನ್​ ಅವರಿಗೆ ಬೆದರಿಕೆ ಹಾಕಿದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.ಸಲ್ಮಾನ್​ ಖಾನ್​ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿ, ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ 25 ವರ್ಷ ವಯಸ್ಸಿನ ಯುವಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಬಾಲಿವುಡ್​ನ ಸ್ಟಾರ್​ ನಟ ಸಲ್ಮಾನ್​ ಖಾನ್​ ಅವರಿಗೆ ಬೆದರಿಕೆ ಹಾಕಿದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.ಸಲ್ಮಾನ್​ ಖಾನ್​ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿ, ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ 25 ವರ್ಷ ವಯಸ್ಸಿನ ಯುವಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಆ ಮೂಲಕ ಟ್ರೋಲ್​ ಮಾಡುವವರಿಗೆ, ಬೆದರಿಕೆ ಹಾಕುವವರಿಗೆ ಎಚ್ಚರಿಕೆ ಸಂದೇಶ ರವಾನಿಸಲಾಗಿದೆ.

Ad
300x250 2

ಯೂಟ್ಯೂಬ್​ ಮೂಲಕ ಸಲ್ಮಾನ್​ ಖಾನ್​ಗೆ ಕೊಲೆ ಬೆದರಿಕೆ ಹಾಕಿದ ವ್ಯಕ್ತಿ ಕೂಡ ತನ್ನ ವಿಡಿಯೋದಲ್ಲಿ ಈ ಹಿಂದೆ ಅಟ್ಯಾಕ್‌ ಮಾಡಿದ್ದ ಬಿಷ್ಣೋಯ್​ ಗ್ಯಾಂಗ್​ ಬಗ್ಗೆ ಉಲ್ಲೇಖಿಸಿದ್ದಾನೆ ಎಂದು ವರದಿ ಆಗಿದೆ.

ಯೂಟ್ಯೂಬ್​ ಮೂಲಕ ಸಲ್ಮಾನ್​ ಖಾನ್​ಗೆ ಬೆದರಿಕೆ ಹಾಕಿದ ಯುವಕ ರಾಜಸ್ಥಾನ ಮೂಲದವನು. ಬನ್ವರ್​ಲಾಲ್​ ಲತುರ್ಲಾಲ್​ ಗುಜ್ಜರ್​ ಎಂದು ಆತನನ್ನು ಗುರುತಿಸಲಾಗಿದೆ. ಗ್ರಾಮೀಣ ಭಾಗದ ಯುವಕನಾದ ಆತ ತನ್ನ ಯೂಟ್ಯೂಬ್​ ಚಾನೆಲ್​ ಮೂಲಕ ಸ್ಟಾರ್​ ನಟನಿಗೆ ಬೆದರಿಕೆ ಹಾಕಿದ್ದಾನೆ. ಮುಂಬೈ ಸೈಬರ್​ ಪೊಲೀಸರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು, ರಾಜಸ್ಥಾನಕ್ಕೆ ತೆರಳಿ ಆತನನ್ನು ಅರೆಸ್ಟ್​ ಮಾಡಿದ್ದಾರೆ.

Ad
Ad
Nk Channel Final 21 09 2023
Ad