News Karnataka Kannada
Monday, May 06 2024
ಮನರಂಜನೆ

4 ರಾಷ್ಟ್ರ ಪ್ರಶಸ್ತಿ ಪಡೆದಿದ್ದ ಕಲಾನಿರ್ದೇಶಕ ನೇಣಿಗೆ ಶರಣು

Nitin Desai suicide
Photo Credit : News Kannada

ಮುಂಬೈ: ಕಲಾನಿರ್ದೇಶನಕ್ಕಾಗಿ ಬರೋಬ್ಬರಿ ನಾಲ್ಕು ರಾಷ್ಟ್ರ ಪ್ರಶಸ್ತಿಯನ್ನು ಪಡೆದಿದ್ದ ಬಾಲಿವುಡ್ ನ ಖ್ಯಾತ ಆರ್ಟ್ ಡೈರೆಕ್ಟರ್ ನಿತಿನ್ ದೇಸಾಯಿ ನೇಣಿಗೆ ಶರಣಾಗಿದ್ದಾರೆ.

ಬಾಲಿವುಡ್ ನಲ್ಲಿ ಕಲಾ ನಿರ್ದೇಶಕರಾಗಿ, ನಿರ್ದೇಶಕರಾಗಿ, ಪ್ರೊಡಕ್ಷನ್ ಡಿಸೈನರ್ ಆಗಿ ಹೀಗೆ ವಿವಿಧ ವಿಭಾಗಗಳಲ್ಲಿ ದೇಸಾಯಿ ಕೆಲಸ ಮಾಡಿದ್ದರು. ಅಲ್ಲದೇ, ಹಿಂದಿ ಮತ್ತು ಮರಾಠಿ ಕಿರುತೆರೆಯಲ್ಲೂ ಸಾಕಷ್ಟು ಕೆಲಸ ಮಾಡಿದ್ದರು. ಸಂಜಯ್ ಲೀಲಾ ಬನ್ಸಾಲಿ ಸೇರಿದಂತೆ ಖ್ಯಾತ ನಿರ್ದೇಶಕರ ಸಿನಿಮಾಗಳಿಗೆ ಸೆಟ್ ಹಾಕಿದ್ದ ಹೆಗ್ಗಳಿಕೆ ಇವರದ್ದು.

ಆಗಸ್ಟ್ 9‍ಕ್ಕೆ ಅವರು 58ನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳಬೇಕಿತ್ತು. ಅಷ್ಟರಲ್ಲಿ ಇಂಥದ್ದೊಂದು ತಪ್ಪು ನಿರ್ಧಾರವನ್ನು ಅವರು ಕೈಗೊಂಡಿದ್ದಾರೆ ಎನ್ನುತ್ತಾರೆ ದೇಸಾಯಿ ಆಪ್ತರು. ಕಲಾ ನಿರ್ದೇಶನಕ್ಕಾಗಿಯೇ ಅವರು 4 ರಾಷ್ಟ್ರ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದರು. ಇದೀಗ ಮುಂಬೈನ ಕರ್ಜತ್ ಎನ್.ಡಿ ಸ್ಟುಡಿಯೋದಲ್ಲಿ ನೇಣಿಗೆ ಶರಣಾಗಿದ್ದಾರೆ.

ಸಾವಿಗೆ ಕಾರಣ ತಿಳಿದು ಬಂದಿಲ್ಲವಾದರೂ ಆರ್ಥಿಕ ಸಂಕಷ್ಟವೇ ಕಾರಣ ಇರಬಹುದು ಎಂದು ಅಂದಾಜಿಸಲಾಗಿದೆ. ಈ ಕುರಿತು ತನಿಖೆ ನಡೆಯುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು