ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ತನ್ನದೇ ಆದಂತ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿ ರಾಜ್ಯ, ರಾಷ್ಟ್ರ ಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ, ನಿರ್ದೇಶಕ ಕೋಡಳ್ಳಿ ಶಿವರಾಮ್ ವಿಧಿವಶರಾಗಿದ್ದಾರೆ.
ಇದು ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನು ಉಂಟು ಮಾಡಿದೆ. 1978ರಲ್ಲಿ ‘ಗ್ರಹಣ’ ಹೆಸರಿನ ಸಿನಿಮಾ ಬಂತು. ಈ ಚಿತ್ರಕ್ಕೆ ಕಥೆ ಬರೆದಿದ್ದು ಕೋಡಳ್ಳಿ ಶಿವರಾಮ್ ಅವರು. ಈ ಚಿತ್ರವನ್ನು ಟಿಎಸ್ ನಾಗಾಭರಣ ಅವರು ನಿರ್ದೇಶನ ಮಾಡಿದ್ದರು. ಈ ಸಿನಿಮಾಗೆ ರಾಷ್ಟ್ರ ಹಾಗೂ ರಾಜ್ಯ ಪ್ರಶಸ್ತಿ ಸಿಕ್ಕಿತ್ತು. ಕಳೆದ ರಾತ್ರಿ (ಸೆ.17) ನಿಧನ ಹೊಂದಿದ್ದಾರೆ.
ಕೋಡಳ್ಳಿ ಶಿವರಾಮ್ ಅವರು ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದಂತ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿ ಗಮನ ಸೆಳೆದಿದ್ದಾರೆ. ಅವರಿಗೆ ರಾಜ್ಯ ಹಾಗೂ ರಾಜ್ಯ, ರಾಷ್ಟ್ರ ಪ್ರಶಸ್ತಿಗಳು ಕೂಡ ಸಿಕ್ಕಿವೆ. ಪ್ರಶಸ್ತಿ ಆಯ್ಕೆ ಸಮಿತಿಯಲ್ಲೂ ಅವರು ಇದ್ದರು.
Ad