Bengaluru 22°C
Ad

ʼಬೆನ್ನಿಗೆ ಚೂರಿ ಹಾಕೋರು ಮುಂದೆ ಸ್ನೇಹಿತರಾಗಬಹುದುʼ ಎಂದ ಕಿಚ್ಚ

Kicha

ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಬಿಗ್ ಬಾಸ್ ಸೀಸನ್ 11 ಆರಂಭಕ್ಕೆ ಇನ್ನೆನ್ನೂ ಕೆಲವೇ ಕೆಲವು ದಿನಗಳ ಮಾತ್ರವೇ ಭಾಕಿ ಇದೆ. ಇದೇ ಸೆಪ್ಟೆಂಬರ್ 29ರಂದು ಬಿಗ್ ​ಬಾಸ್​ ಗ್ರ್ಯಾಂಡ್​ ಓಪನಿಂದ ಆಗಲಿದೆ. ಈ ಮಧ್ಯೆ ಬಿಗ್​ಬಾಸ್​ ಸೀಸನ್​ 11ರ ಮತ್ತೊಂದು ಪ್ರೋಮೋ ರಿಲೀಸ್ ಆಗಿದ್ದು ಪ್ರೋಮೋದಲ್ಲಿ “ಬೆನ್ನಿಗೆ ಚೂರಿ ಹಾಕೋರು ಮುಂದೆ ಸ್ನೇಹಿತರಾಗಬಹುದು” ಎಂದು ಸುದೀಪ್ ಹೇಳಿದ್ದಾರೆ.

ಮೊದಲ ಸೀಸನ್​ನಿಂದ ಹಿಡಿದು ಹತ್ತು ಸೀಸನ್​ಗಳು ಯಶಸ್ವಿಯಾಗಿ ಪ್ರಸಾರ ಕಂಡಿದೆ. ಪ್ರತಿ ಸೀಸನ್​ನಲ್ಲಿ ಭಿನ್ನ ವಿಭಿನ್ನವಾಗಿರೋ ಲೋಗೋಗಳು ಅನಾವರಣ ಆಗುತ್ತಲೇ ಇರುತ್ತೆ. ಆದರೆ ಈ ಬಾರಿಯ ಬಿಗ್​​ಬಾಸ್​ ಲೋಗೋದಲ್ಲಿ ಒಂದು ಕಡೆ ಬೆಂಕಿ, ಮತ್ತೊಂದು ಕಡೆ ನೀರು ಇದ್ದು ಸಾಕಷ್ಟು ಕುತೂಹಲ ಮೂಡಿಸಿದೆ. ಅಂದರೆ ಬಿಗ್​ಬಾಸ್ ಮನೆಯೊಳಗೆ ಸ್ಪರ್ಧಿಗಳ ಆಕ್ರೋಶ, ಜಗಳ, ಕಿತ್ತಾಟ, ಕಣ್ಣೀರು, ಭಾವನಾತ್ಮಕ ನಂಟಿನ ಸಾರವನ್ನು ಹೇಳ್ತಿದೆ.

ಸದ್ಯ ರಿಲೀಸ್ ಆಗಿರುವ ಪ್ರೋಮೋದಲ್ಲಿ ಸುದೀಪ್ ಡಿಫರೆಂಟ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಬೆಳಕು, ಸಂತೋಷ, ಸುಖ, ನೆಮ್ಮದಿ ಸ್ವರ್ಗ. ಕತ್ತಲು, ನೋವು, ಕಷ್ಟ, ಹಿಂಸೆ, ನರಕ. ಸ್ವರ್ಗದಲ್ಲಿ ಇರಬೇಕದವರು ನರಕದಲ್ಲಿ ಇರಬಹುದು. ನರಕದಲ್ಲಿ ಇರಬೇಕಾದವರು ಸ್ವರ್ಗದಲ್ಲಿ ಇರಬಹುದು. ಬೆನ್ನಿಗೆ ಚೂರಿ ಹಾಕ್ತಾರೆ ಅಂತ ಅನ್ಕೊಂಡವರು ಮುಂದೆ ಹೋಗಿ ನಿಮ್ಮ ಸ್ನೇಹಿತರು ಆಗಬಹುದು. ಸ್ನೇಹಿತರಾಗಿರುತ್ತಾರೆ ಅನ್ಕೊಂಡವರು ಮುಂದೆ ಹೋಗಿ..? ಇದು ಬಿಗ್​ ಬಾಸ್​ನ ಹೊಸ ಅಧ್ಯಾಯ. ಸ್ವರ್ಗ, ನರಕ ಎರಡು ಇದೆ. ಎರಡರಲ್ಲೂ ಕಿಚ್ಚು ಅಷ್ಟೇ ಇದೆ ಎಂದು ಹೇಳಿದ್ದಾರೆ.

Ad
Ad
Nk Channel Final 21 09 2023