News Karnataka Kannada
Monday, April 29 2024
ಮನರಂಜನೆ

ಬಾಕ್ಸ್ ಆಫೀಸ್​ನಲ್ಲಿ ನೆಲಕಚ್ಚಿದ ‘ಬಡೇ ಮಿಯಾ ಚೋಟೆ ಮಿಯಾ’

ಈದ್ ಹಬ್ಬದ ಸಂದರ್ಭದಲ್ಲಿ ರಿಲೀಸ್ ಆದ ಅಕ್ಷಯ್ ಕುಮಾರ್ ಹಾಗೂ ಟೈಗರ್ ಶ್ರಾಫ್ ನಟನೆಯ ‘ಬಡೇ ಮಿಯಾ ಚೋಟೆ ಮಿಯಾ’  ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಹೀನಾಯ ಸೋಲು ಕಂಡಿದೆ.
Photo Credit : NewsKarnataka

ಮುಂಬೈ: ಈದ್ ಹಬ್ಬದ ಸಂದರ್ಭದಲ್ಲಿ ರಿಲೀಸ್ ಆದ ಅಕ್ಷಯ್ ಕುಮಾರ್ ಹಾಗೂ ಟೈಗರ್ ಶ್ರಾಫ್ ನಟನೆಯ ‘ಬಡೇ ಮಿಯಾ ಚೋಟೆ ಮಿಯಾ’  ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಹೀನಾಯ ಸೋಲು ಕಂಡಿದೆ.

ಏಪ್ರಿಲ್ 11ರಂದು ರಿಲೀಸ್ ಆದ ಈ ಚಿತ್ರ ಐದನೇ ದಿನಕ್ಕೆ ನೆಲಕಚ್ಚಿದೆ. ಈ ಚಿತ್ರ 100 ಕೋಟಿ ರೂಪಾಯಿ ತಲುಪೋದು ಅನುಮಾನ ಎನ್ನಲಾಗುತ್ತಿದೆ.

‘ಬಡೇ ಮಿಯಾ ಚೋಟೆ ಮಿಯಾ’ ಸಿನಿಮಾ ಮೊದಲ ದಿನ (ಶನಿವಾರ) 15 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಎರಡನೇ ದಿನ (ಶುಕ್ರವಾರ) ಈ ಸಿನಿಮಾ 7.6 ಕೋಟಿ ರೂಪಾಯಿ, ಮೂರನೇ ದಿನ (ಶನಿವಾರ) 8.5 ಕೋಟಿ ರೂಪಾಯಿ ಹಾಗೂ ನಾಲ್ಕನೇ ದಿನ (ಭಾನುವಾರ) 9.5 ಕೋಟಿ ರೂಪಾಯಿ ಗಳಿಕೆ ಮಾಡಿತು. ಸೋಮವಾರ (ಏಪ್ರಿಲ್ 15) ಸಿನಿಮಾದ ಗಳಿಕೆ ಸಂಪೂರ್ಣ ನೆಲಕಚ್ಚಿದೆ. ಈ ಚಿತ್ರ ಕೇವಲ 2.50 ಕೋಟಿ ರೂಪಾಯಿ ಕಮಾಯಿ ಮಾಡಿದೆ. ಈ ಮೂಲಕ ಒಟ್ಟೂ ಕಲೆಕ್ಷನ್ 43 ಕೋಟಿ ರೂಪಾಯಿ ಆಗಿದೆ.

‘ಬಡೇ ಮಿಯಾ ಚೋಟೆ ಮಿಯಾ’ ಸಿನಿಮಾದಲ್ಲಿ ಅಕ್ಷಯ್ ಕುಮಾರ್ ಜೊತೆ ಟೈಗರ್ ಶ್ರಾಫ್, ಪೃಥ್ವಿರಾಜ್​ ಸುಕುಮಾರನ್ ಸೇರಿ ಅನೇಕರು ನಟಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು