ಮುಂಬೈ: ಅಕ್ಷಯ್ ಕುಮಾರ್ ಹಾಗೂ ಟೈಗರ್ ಶ್ರಾಫ್ ನಟನೆಯ ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾದ ಎರಡನೇ ದಿನದ ಗಳಿಕೆ ಒಂದಂಕಿಗೆ ಇಳಿದಿದೆ. ಈ ಚಿತ್ರದ ಒಟ್ಟಾರೆ ಗಳಿಕೆ 100 ಕೋಟಿ ರೂಪಾಯಿ ಆಗೋದು ಅನುಮಾನ ಎನ್ನಲಾಗುತ್ತಿದೆ.
ಮೊದಲ ದಿನ ‘ಬಡೇ ಮಿಯಾ ಚೋಟೆ ಮಿಯಾ’ ಸಿನಿಮಾ 15.65 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಎರಡನೇ ದಿನ ಅಂದರೆ ಶುಕ್ರವಾರ (ಏಪ್ರಿಲ್ 12) ಕೇವಲ 7 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ 22.65 ಕೋಟಿ ರೂಪಾಯಿ ಗಳಿಕೆ ಆಗಿದೆ.
ಇಂದು (ಏಪ್ರಿಲ್ 13) ಹಾಗೂ ನಾಳೆ (ಏಪ್ರಿಲ್ 14) ಸಿನಿಮಾ ದೊಡ್ಡ ಮೊತ್ತ ಕಲೆಕ್ಷನ್ ಮಾಡಿದರೂ ಸೋಮವಾರದಿಂದ ಕಲೆಕ್ಷನ್ ಕಡಿಮೆ ಆಗಲಿದೆ.
ಅಕ್ಷಯ್ ಕುಮಾರ್, ಟೈಗರ್ ಶ್ರಾಫ್, ಪೃಥ್ವಿರಾಜ್ ಸುಕುಮಾರನ್ ‘ಬಡೇ ಮಿಯಾ ಚೋಟೆ ಮಿಯಾ’ ಸಿನಿಮಾದಲ್ಲಿ ನಟಿಸಿದ್ದಾರೆ. ಇಷ್ಟು ದೊಡ್ಡ ಪಾತ್ರವರ್ಗ ಇದ್ದ ಹೊರತಾಗಿಯೂ ಸಿನಿಮಾ ತೂಕ ಕಳೆದುಕೊಂಡಿದೆ.