ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿ ಹರ್ಷಿಕಾ ಪೂಣಚ್ಚ  ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಹಿಂದೆ ಹರ್ಷಿಕಾ ಮತ್ತು ಭುವನ್ ಕೊಡವ ಶೈಲಿ ಹಾಗೂ ಸಂಪ್ರದಾಯದ ಕಾನ್ಸೆಪ್ಟ್‌ ಇಟ್ಟುಕೊಂಡು ಫೋಟೊ ಶೂಟ್‌ ಮಾಡಿಸುವ ಮೂಲಕ ಗಮನ ಸೆಳೆದಿದ್ದರು. ಇದೀಗ 7 ತಿಂಗಳ ಗರ್ಭಿಣಿಯಾಗಿರುವ ಹರ್ಷಿಕಾ ಪೂಣಚ್ಚ, ರವಿವರ್ಮ ಪೇಂಟಿಂಗ್ ಥೀಮ್‌ನಲ್ಲಿ ಫೋಟೋಶೂಟ್ ಮಾಡಿಸಿದ್ದಾರೆ. ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ಸ್ಯಾಂಡಲ್ ವುಡ್ ಸುಂದರಿ ಹರ್ಷಿಕಾ ತಿಳಿ ಗುಲಾಬಿ ಬಣ್ಣದ ಸೀರೆಗೆ ಹಸಿರು ಬಳೇ ತೊಟ್ಟು ಕ್ಯಾಮೆರಾಗೆ ಫೋಸ್‌ ಕೊಟ್ಟಿದ್ದಾರೆ.

ತಾವು ಪೋಷಕರಾಗುತ್ತಿರುವ ವಿಚಾರವನ್ನು ಭುವನ್ ಮತ್ತು ಹರ್ಷಿಕಾ ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ. ಸದ್ಯ ಹರ್ಷಿಕಾ ಐದು ತಿಂಗಳ ಗರ್ಭಿಣಿ ಆಗಿದ್ದು, ಈ ಖುಷಿ ವಿಚಾರವನ್ನ ವಿಭಿನ್ನ ರೀತಿಯಲ್ಲಿ ಫೋಟೊ ಶೂಟ್ ಮಾಡಿಸುವ ಮೂಲಕ ಹಂಚಿಕೊಂಡಿದ್ದಾರೆ.

ರವಿವರ್ಮನ ಪೇಂಟಿಂಗ್​ ರೀತಿ ಫೋಟೊಶೂಟ್ ಮಾಡಿಸಿದ್ದು ಮಾತ್ರವೇ ಅಲ್ಲದೆ, ಸ್ವತಃ ತಮ್ಮ ಚಿತ್ರವನ್ನು ಪೇಂಟಿಂಗ್ ಸಹ ಮಾಡಿಸಿಕೊಂಡಿದ್ದಾರೆ ನಟಿ ಹರ್ಷಿಕಾ ಪೂಣಚ್ಚ.

ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಪೋಷಕರಾಗುತ್ತಿದ್ದಾರೆ. ಹರ್ಷಿಕಾ ಪೂಣಚ್ಚ ಗರ್ಭಿಣಿಯಾಗಿದ್ದು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

ಇತ್ತೀಚೆಗಷ್ಟೆ ಹರ್ಷಿಕಾರ ಸೀಮಂತ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿತ್ತು. ಚಿತ್ರರಂಗದ ಹಲವು ಗಣ್ಯರು ಸೀಮಂತ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.