News Karnataka Kannada
Tuesday, April 30 2024
ಮನರಂಜನೆ

ವಾರಣಾಸಿ: ಭೋಜ್‌ಪುರಿ ನಟಿ ಆಕಾಂಕ್ಷಾ ದುಬೆ ಆತ್ಮಹತ್ಯೆ

Bhojpuri actress Akanksha Dubey commits suicide in Varanasi
Photo Credit : IANS

ವಾರಣಾಸಿ: ಭೋಜ್‌ಪುರಿ ನಟಿ ಆಕಾಂಕ್ಷಾ ದುಬೆ ಭಾನುವಾರ ವಾರಣಾಸಿಯ ಹೋಟೆಲ್ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾರನಾಥ ಪ್ರದೇಶದ ತನ್ನ ಹೋಟೆಲ್ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ಚಿತ್ರದ ಶೂಟಿಂಗ್‌ಗಾಗಿ ವಾರಣಾಸಿಗೆ ಆಕೆ ಬಂದಿದ್ದು, ಈ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯ ಬಗ್ಗೆ ಪೊಲೀಸರು ಆಕೆಯ ಮನೆಯವರಿಗೆ ಮಾಹಿತಿ ನೀಡಿದ್ದಾರೆ.

ಆಕಾಂಕ್ಷಾ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಜನಿಸಿದ್ದು ಎಳೆಯ ವಯಸ್ಸಿನಲ್ಲಿ ನೃತ್ಯ, ನಟನೆಯಲ್ಲಿ ಮುಂದಿದ್ದರು. ಅವರು ಟಿಕ್‌ಟಾಕ್‌ ಸ್ಟಾರ್‌ ಆಗಿ ಮಿಂಚಿದ್ದರು. ಅಲ್ಲದೇ ಇನ್‌ಸ್ಟಾಗ್ರಾಂನಲ್ಲಿ ಕಿರು ವಿಡಿಯೋ ಹಾಕಿ ಜನರನ್ನು ರಂಜಿಸುತ್ತಿದ್ದರು. ಶನಿವಾರ ರಾತ್ರಿಯೂ ಸಹ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದರು.

ಸುಮಾರು ಒಂದು ತಿಂಗಳ ಹಿಂದೆ, ಪ್ರೇಮಿಗಳ ದಿನದಂದು ಹನಟ ಸಮರ್ ಸಿಂಗ್ ಜೊತೆಗಿನ ಫೋಟೋಗಳನ್ನು ಅವರು ಹಂಚಿಕೊಂಡಿದ್ದರು. ಹ್ಯಾಪಿ ವ್ಯಾಲೆಂಟೈನ್ಸ್ ಡೇ’ ಎಂದು ಬರೆದಿದ್ದಳು. ಘಟನೆಯ ಬಗ್ಗೆ ಪ್ರತಿಕ್ರಿಯಿಸಲು ಪೊಲೀಸ್ ಅಧಿಕಾರಿಗಳು ನಿರಾಕರಿಸಿದ್ದಾರೆ.

ಸಹಾಯವಾಣಿಗೆ ಕರೆ ಮಾಡಿ:

ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು