News Karnataka Kannada
Saturday, May 04 2024
ಮನರಂಜನೆ

ಬಿಗ್‌ ಬಾಸ್‌: ತನಿಷಾಗೆ ತಪ್ಪದ ಸಂಕಷ್ಟ, ಮತ್ತೊಂದು ದೂರು ದಾಖಲು

Bigg Boss 10: Another complaint filed against Tanishaa
Photo Credit : News Kannada

ಬೆಂಗಳೂರು: ಈ ಬಾರಿ ಬಿಗ್‌ ಬಾಸ್‌ ಪೊಲೀಸ್‌ ಠಾಣೆಯಲ್ಲಿ ನಡೆಯುತ್ತಿದ್ದೆಯೇ ಅಥವಾ ಬಿಗ್‌ ಬಾಸ್‌ ಮನೆಯಲ್ಲಿಯೇ ಎಂಬ ಪ್ರಶ್ನೆ ಕಾಡುವಂತಾಗಿದೆ. ಈ ಮೊದಲು ವರ್ತೂರು ಸಂತೋಷ್‌ ಹುಲಿ ಉಗುರು ಆರೋಪದಲ್ಲಿ ಜೈಲಿಗೆ ಹೋಗಿದ್ದರು.

ನಿನ್ನೆಯಷ್ಟೆ ಬಿಗ್ ಬಾಸ್ ಸ್ಪರ್ಧಿ, ನಟಿ ತನಿಷಾ ಕುಪ್ಪಂಡ ವಿರುದ್ಧ ದೂರು ದಾಖಲಾಗಿತ್ತು. ಇದೀಗ ಆಕೆ ವಿರುದ್ಧ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಸದ್ಯ ಬಿಗ್ ಬಾಸ್ ಮನೆಯಲ್ಲಿರುವ ನಟಿ ಮೇಲೆ ಜಾತಿ ನಿಂದನೆ ವಿಚಾರವಾಗಿ ಎಸ್‌ಸಿಎಸ್ಟಿ ಕಾಯ್ದೆಯಡಿ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ದೂರು ದಾಖಲಿಸಿದ್ದಾರೆ.

ಈ ಹಿಂದೆ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಟಿ ತನಿಷಾ ಕುಪ್ಪಂಡ ವಿರುದ್ಧ ಅಖಿಲ ಕರ್ನಾಟಕ ಬೋವಿ ಸಮಾಜದ ರಾಜ್ಯಾಧ್ಯಕ್ಷೆ ಪಿ ಪದ್ಮಾ ಎಂಬುವರಿಂದ ನವೆಂಬರ್ 11ರಂದು ದೂರು ದಾಖಲಾಗಿದ್ದು, ನವೆಂಬರ್‌ 12 ದೂರಿನ ಆಧಾರದ ಮೇಲೆ‌ ಕುಂಬಳಗೋಡು ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಖಾಸಗಿ ವಾಹಿನಿಯ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಅವಹೇಳನಕಾರಿ ಪದ ಬಳಕೆ ಬಗ್ಗೆ ತನಿಷಾ ವಿರುದ್ಧ ಆರೋಪ ಎದುರಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಕುಂಬಳಗೋಡು ಪೊಲೀಸರು ಬಿಗ್ ಬಾಸ್ ಮನೆಗೆ ತೆರಳಿ, ನಟಿಯ ವಿಚಾರಣೆ ನಡೆಸಿದ್ದಾರೆ. ಜೊತೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಪೊಲೀಸರು ಮುಂದುವರೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು