Bengaluru 23°C
Ad

ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಿಗ್​ಬಾಸ್-10ರ​ ಸ್ಪರ್ಧಿ ಸಿರಿ

Siri

ಬೆಂಗಳೂರು: ಕನ್ನಡ ಕಿರುತೆರೆಯ ಖ್ಯಾತ ನಟಿ, ಬಿಗ್​ಬಾಸ್​ ಸೀಸನ್​-10ರ ಸ್ಪರ್ಧಿ ಸಿರಿ ಅವರು ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.  ಉದ್ಯಮಿ ಪ್ರಭಾಕರ್​ ಬೋರೇಗೌಡ ಎಂಬುವವರ ಜೊತೆ ಸಿರಿ ಸಪ್ತಪದಿ ತುಳಿದಿದ್ದಾರೆ.

ಮಂಡ್ಯ ಮೂಲದವರಾದ ಪ್ರಭಾಕರ್​ ಬೆಂಗಳೂರಿನಲ್ಲಿ ಕುಟುಂಬಸ್ಥರೊಂದಿಗೆ ನೆಲೆಸಿದ್ದಾರೆ. ಚಿಕ್ಕಬಳ್ಳಾರಪುರ ಬಳಿ ಇರುವ ಭೋಗ ನಂದೀಶ್ವರ ದೇವಾಲಯದಲ್ಲಿ ಮದುವೆ ನೆರೆವೇರಿದ್ದು, ಕುಟುಂಬಸ್ಥರು ಸೇರಿದಂತೆ ಕೆಲವೇ ಕೆಲವು ಆಪ್ತರು ಭಾಗಿಯಾಗಿದ್ದಾರೆ. ಆದರೆ, ಮದುವೆ ಆಗಿರುವ ಬಗ್ಗೆ ನಟಿ ಸಾಮಾಜಿಕ ಜಾಲತಾಣದ ಮೂಲಕ ತಿಳಿಸಿದ್ದಾರೆ.

ಎರಡು ದಿನಗಳ ಹಿಂದೆ ಸಿರಿ ಅವರಿಗೆ ಮೈತುಂಬ ಅರಿಷಿಣ ಹಚ್ಚಿರುವ ವಿಡಿಯೋ ವೈರಲ್ ಆಗಿತ್ತು. ಇದು ಸಿನಿಮಾ ಅಥವಾ ಧಾರಾವಾಹಿ ಶೂಟಿಂಗ್ ಇರಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ ಸಿರಿ ಅವರು ರಿಯಲ್ ಲೈಫ್‌ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡುವ ಮೂಲಕ ಹಲವರಿಗೆ ಅಚ್ಚರಿಯನ್ನುಂಟು ಮಾಡಿದ್ದಾರೆ.

ಗುರುಹಿರಿಯರು ನಿಶ್ಚಯಿಸಿದ ಮದುವೆ ಇದಾಗಿದ್ದು, ಜೂನ್ 13ರಂದು ಸರಳವಾಗಿ ಮದುವೆ ನಡೆದಿದೆ. ಸದ್ಯ ನಟಿಯ ಮದುವೆ ಸುದ್ದಿ ಕೇಳಿ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಶುಭಕೋರುತ್ತಿದ್ದಾರೆ.

Ad
Ad
Nk Channel Final 21 09 2023
Ad