Bengaluru 22°C
Ad

ವಿಜಯ್ ಕೊನೆಯ ಸಿನಿಮಾದಲ್ಲಿ ಬಾಬಿ ಡಿಯೋಲ್ ವಿಲನ್ ಆಗಿ ಎಂಟ್ರಿ

ತಮಿಳಿನ ಸ್ಟಾರ್ ನಟ ವಿಜಯ್ ದಳಪತಿ ಕೊನೆಯ ಸಿನಿಮಾ ಕುರಿತು ಇದೀಗ ಇಂಟರೆಸ್ಟಿಂಗ್‌ ಅಪ್‌ಡೇಟ್‌ವೊಂದು ಸಿಕ್ಕಿದೆ. ಕನ್ನಡದ ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣದ ಸಿನಿಮಾದಲ್ಲಿ ವಿಜಯ್ ಕಡೆಯದಾಗಿ ಕಾಣಿಸಿಕೊಳ್ಳುತ್ತಿದ್ದು, ಈ ಚಿತ್ರದಲ್ಲಿ ಬಾಬಿ ಡಿಯೋಲ್ ವಿಲನ್ ಆಗಿ ಅಬ್ಬರಿಸಲಿದ್ದಾರೆ ಎಂಬ ಸುದ್ದಿಯೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಮಿಳಿನ ಸ್ಟಾರ್ ನಟ ವಿಜಯ್ ದಳಪತಿ ಕೊನೆಯ ಸಿನಿಮಾ ಕುರಿತು ಇದೀಗ ಇಂಟರೆಸ್ಟಿಂಗ್‌ ಅಪ್‌ಡೇಟ್‌ವೊಂದು ಸಿಕ್ಕಿದೆ. ಕನ್ನಡದ ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣದ ಸಿನಿಮಾದಲ್ಲಿ ವಿಜಯ್ ಕಡೆಯದಾಗಿ ಕಾಣಿಸಿಕೊಳ್ಳುತ್ತಿದ್ದು, ಈ ಚಿತ್ರದಲ್ಲಿ ಬಾಬಿ ಡಿಯೋಲ್ ವಿಲನ್ ಆಗಿ ಅಬ್ಬರಿಸಲಿದ್ದಾರೆ ಎಂಬ ಸುದ್ದಿಯೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ವಿಜಯ್ ನಟನೆಯ 69ನೇ ಸಿನಿಮಾದಲ್ಲಿ ‘ಅನಿಮಲ್’ ಖ್ಯಾತಿಯ ನಟ ಬಾಬಿ ಡಿಯೋಲ್ ಖಳನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಿರುವ ನಟನನ್ನು ಚಿತ್ರತಂಡ ಸಂಪರ್ಕಿಸಿದೆ. ವಿಜಯ್ ಸಿನಿಮಾದಲ್ಲಿ ನಟಿಸುವ ಕುರಿತು ಬಾಬಿ ಡಿಯೋಲ್‌ ಜೊತೆ ಒಂದು ಹಂತದ ಮಾತುಕತೆಯಾಗಿದ್ದು, ಕಥೆ ಮತ್ತು ಪಾತ್ರದ ಕುರಿತು ಚರ್ಚೆಯಾಗಿದೆ ಎನ್ನಲಾಗಿದೆ. ಅಷ್ಟಕ್ಕೂ ಈ ಸುದ್ದಿ ನಿಜನಾ? ಎಂಬುದನ್ನು ಚಿತ್ರತಂಡ ಅಧಿಕೃತವಾಗಿ ತಿಳಿಸುವವರೆಗೂ ಕಾದುನೋಡಬೇಕಿದೆ.
Ad
Ad
Nk Channel Final 21 09 2023