ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಅನಿಲ್ ಅರೋರಾ ಅವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬಿಲ್ಡಿಂಗ್ ಮೇಲಿಂದ ಕೆಳಗೆ ಹಾರಿರುವ ಅನಿಲ್ ಅರೋರಾ ಪ್ರಾಣ ಬಿಟ್ಟಿದ್ದಾರೆ ಅನ್ನೋ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಮುಂಬೈನಲ್ಲಿರುವ ಮನೆಯ ಟೆರೇಸ್ ಮೇಲೆ ತೆರಳಿರುವ ಮಲೈಕಾ ಅರೋರಾ ಅವರು ಕೆಳಗೆ ಜಂಪ್ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಮುಂಬೈನ ಕ್ರೈಮ್ ಬ್ರಾಂಚ್ ಪೊಲೀಸರು ಭೇಟಿ ನೀಡಿ ಹೆಚ್ಚಿನ ಮಾಹಿತಿ ಕಲೆ ಹಾಕಿದ್ದಾರೆ.
ಮುಂಬೈನ ಬಾಂದ್ರಾ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಅನಿಲ್ ಅರೋರಾ ಅವರು ತಮ್ಮ 6 ಅಂತಸ್ತಿನ ಕಟ್ಟಡದ ಮೇಲಿಂದ ಬಿದ್ದು ಸಾವನ್ನಪ್ಪಿದ್ದಾರೆ. ಸುದ್ದಿ ತಿಳಿದ ಕೂಡಲೇ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆತ್ಮಹತ್ಯೆ ಮಾಡಿಕೊಂಡಿರೋದನ್ನು ಖಚಿತಪಡಿಸಿದ್ದಾರೆ. ಆದರೆ ಘಟನಾ ಸ್ಥಳದಲ್ಲಿ ಯಾವುದೇ ಡೆತ್‌ನೋಟ್ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Ad