ಮೈಸೂರು: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು ನಂಜನಗೂಡಿನ ನಂಜುಂಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸಿದ್ದಾರೆ. ಬಳಿಕ ದೇವಸ್ಥಾನದ ಆವರಣದಲ್ಲಿ ಕುಳಿತು ಧ್ಯಾನ ಮಾಡಿದ್ದಾರೆ.
ಸದ್ಯ ಅವರು ಕನ್ನಡದ ‘ಕೆಡಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಆ ಪ್ರಯುಕ್ತ ಮೈಸೂರಿಗೆ ಬಂದಿದ್ದಾರೆ.
‘ಕೆಡಿ’ ಸಿನಿಮಾಗೆ ‘ಜೋಗಿ’ ಪ್ರೇಮ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ‘ಕೆವಿಎನ್ ಪ್ರೊಡಕ್ಷನ್ಸ್’ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮೂಡಿಬರುತ್ತಿರುವ ಈ ಸಿನಿಮಾದಲ್ಲಿ ಬಹುತಾರಾಗಣ ಇದೆ. ಪರಭಾಷೆಯ ಕಲಾವಿದರು ಕೂಡ ಈ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಸಂಜಯ್ ದತ್, ಶಿಲ್ಪಾ ಶೆಟ್ಟಿ, ರವಿಚಂದ್ರನ್, ರಮೇಶ್ ಅರವಿಂದ್ ಅವರಂತಹ ಘಟಾನುಘಟಿ ಕಲಾವಿದರು ‘ಕೆಡಿ’ ಸಿನಿಮಾದ ಪಾತ್ರವರ್ಗದಲ್ಲಿದ್ದಾರೆ.

