Bengaluru 29°C
Ad

ನಂಜುಂಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ​ ನಟಿ ಶಿಲ್ಪಾ ಶೆಟ್ಟಿ

ಬಾಲಿವುಡ್​ ನಟಿ ಶಿಲ್ಪಾ ಶೆಟ್ಟಿ ಅವರು ನಂಜನಗೂಡಿನ ನಂಜುಂಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸಿದ್ದಾರೆ. ಬಳಿಕ ದೇವಸ್ಥಾನದ ಆವರಣದಲ್ಲಿ ಕುಳಿತು ಧ್ಯಾನ ಮಾಡಿದ್ದಾರೆ.

ಮೈಸೂರು: ಬಾಲಿವುಡ್​ ನಟಿ ಶಿಲ್ಪಾ ಶೆಟ್ಟಿ ಅವರು ನಂಜನಗೂಡಿನ ನಂಜುಂಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸಿದ್ದಾರೆ. ಬಳಿಕ ದೇವಸ್ಥಾನದ ಆವರಣದಲ್ಲಿ ಕುಳಿತು ಧ್ಯಾನ ಮಾಡಿದ್ದಾರೆ.

ಸದ್ಯ ಅವರು ಕನ್ನಡದ ‘ಕೆಡಿ’ ಸಿನಿಮಾದಲ್ಲಿ  ನಟಿಸುತ್ತಿದ್ದಾರೆ. ಆ ಪ್ರಯುಕ್ತ ಮೈಸೂರಿಗೆ ಬಂದಿದ್ದಾರೆ.

‘ಕೆಡಿ’ ಸಿನಿಮಾಗೆ ‘ಜೋಗಿ’ ಪ್ರೇಮ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ‘ಕೆವಿಎನ್​ ಪ್ರೊಡಕ್ಷನ್ಸ್’ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಮೂಡಿಬರುತ್ತಿರುವ ಈ ಸಿನಿಮಾದಲ್ಲಿ ಬಹುತಾರಾಗಣ ಇದೆ. ಪರಭಾಷೆಯ ಕಲಾವಿದರು ಕೂಡ ಈ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಸಂಜಯ್​ ದತ್​, ಶಿಲ್ಪಾ ಶೆಟ್ಟಿ, ರವಿಚಂದ್ರನ್​, ರಮೇಶ್​ ಅರವಿಂದ್​ ಅವರಂತಹ ಘಟಾನುಘಟಿ ಕಲಾವಿದರು ‘ಕೆಡಿ’ ಸಿನಿಮಾದ ಪಾತ್ರವರ್ಗದಲ್ಲಿದ್ದಾರೆ.

Ad
Ad
Nk Channel Final 21 09 2023
Ad