News Karnataka Kannada
Friday, April 19 2024
Cricket
ಬಾಲಿವುಡ್

ಶೀಘ್ರದಲ್ಲೇ ಬಣ್ಣದ ಜಗತ್ತಿಗೆ ಕಾಲಿಡಲಿದ್ದಾರಂತೆ ಸಚಿನ್ ತೆಂಡೂಲ್ಕರ್ ಪುತ್ರಿ!

Saara
Photo Credit :

ಬಾಲಿವುಡ್​ ಮತ್ತೊಂದು ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ತೆಂಡೂಲ್ಕರ್ ಎಂಟ್ರಿ ಪಡೆಯಲು ತುದಿಗಾಲ ಮೇಲೆ ನಿಂತಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸುದ್ದಿಗಳು ಹರಿದಾಡುತ್ತಿದ್ದು, ಶೀಘ್ರದಲ್ಲೇ ಬಾಲಿವುಡ್​ನ ಬಣ್ಣದ ಜಗತ್ತಿಗೆ ಕಾಲಿಡಲಿದ್ದಾರಂತೆ.

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಸಾರಾ ತೆಂಡೂಲ್ಕರ್ ಈಗಾಗಲೇ ಅಪಾರ ಅಭಿಮಾನಿಗಳನ್ನು ಹೊಂದಿರುವ ಸ್ಟಾರ್ ಕಿಡ್ , ನಟನೆಯನ್ನೇ ವೃತ್ತಿಯನ್ನಾಗಿ ತೆಗೆದುಕೊಳ್ಳಲು ಆಸಕ್ತಿ ಹೊಂದಿದ್ದಾರೆ.

ತಮ್ಮ ಮೊದಲ ಮಾಡೆಲಿಂಗ್ ವಿಡಿಯೋದಲ್ಲಿ ಸಾರಾ, ನಟಿ ಬನಿತಾ ಸಂಧು ಮತ್ತು ತಾನಿಯಾ ಶ್ರಾಫ್ ಅವರೊಂದಿಗೆ ಕಾಣಿಸಿಕೊಂಡಿದ್ದರು. ಈ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದ್ದು ನೆಟ್ಟಿಗರನ್ನು ಮಂತ್ರಮುಗ್ಧಗೊಳಿಸಿತ್ತು.

ಅರ್ಜುನ್ ತೆಂಡೂಲ್ಕರ್ ತಮ್ಮ ತಂದೆಯ ಹಾದಿಯನ್ನು ಅನುಸರಿಸುತ್ತಿದ್ದರೆ, ಸಾರಾ ಸಿನಿಮಾದತ್ತ ಮುಖ ಮಾಡಿದ್ದು ಎಲ್ಲರಿಗೂ ಗೊತ್ತಿರುವ ಸಂಗತಿ.ಫ್ಯಾಷನ್​ನಿಂದಲೇ ಗಮನ ಸೆಳೆಯುತ್ತಿರುವ ಸಾರಾ​ ಈಗ ದೇಶಾದ್ಯಂತ ಸುದ್ದಿಯಲ್ಲಿರುವ ಸೆಲೆಬ್ರಿಟಿಗಳ ಪೈಕಿ ಇವರು ಕೂಡ ಒಬ್ಬರು.

ಜನಪ್ರಿಯ ಉಡುಪಿನ ಬ್ರ್ಯಾಂಡ್​​​​ವೊಂದಕ್ಕೆ ಮಾಡೆಲ್​ ಆಗಿರುವ ಈ ಕ್ರಿಕೆಟ್​ ಸೆಲೆಬ್ರಿಟಿಯ ಪುತ್ರಿ ನ್ಯಾಷನಲ್​ ಕ್ರಷ್​ ಸ್ಥಾನ ಸಹ ಅಲಂಕರಿಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು