ಮುಂಬೈ: ಬಾಲಿವುಡ್ನ ಖ್ಯಾತ ನಟ ಅಮಿತಾಭ್ ಬಚ್ಚನ್ ಅವರ ನಿವಾಸದಲ್ಲಿ ಹಾಗೂ ಮೂರು ರೈಲ್ವೆ ನಿಲ್ದಾಣಗಳು ಬಾಂಬ್ ಇಟ್ಟಿರುವುದಾಗಿ ಹುಸಿ ಕರೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಶುಕ್ರವಾರ ರಾತ್ರಿ ಮುಂಬೈ ಪೊಲೀಸ್ನ ಮುಖ್ಯ ನಿಯಂತ್ರಣ ಕೊಠಡಿಗೆ ಅನಾಮಧೇಯ ಕರೆಯೊಂದು ಬಂದಿತ್ತು. ಕರೆ ಮಾಡಿದ್ದ ವ್ಯಕ್ತಿ, ‘ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (ಸಿಎಸ್ಎಂಟಿ), ಬೈಕುಲ್ಲಾ, ದಾದರ್ ರೈಲ್ವೆ ನಿಲ್ದಾಣಗಳು ಮತ್ತು ಜುಹುದಲ್ಲಿನ ಮೆಗಾಸ್ಟಾರ್ ಅಮಿತಾಭ್ ಬಚ್ಚನ್ ಅವರ ಬಂಗಲೆಯಲ್ಲಿ ಬಾಂಬ್ಗಳನ್ನು ಇರಿಸಲಾಗಿದೆ ಎಂದು ಹೇಳಿದ್ದ‘ ಎಂಬುದಾಗಿ ಪೊಲೀಸರು ಮಾಹಿತಿ ನೀಡಿದರು.
ಪೊಲೀಸರು ಕರೆ ಮಾಡಿದವರ ಮೊಬೈಲ್ ಸಂಖ್ಯೆಯನ್ನು ಟ್ರ್ಯಾಕ್ ಮಾಡಿದಾಗ, ಕರೆ ಮಾಡಿದ ವ್ಯಕ್ತಿ ಠಾಣೆ ಜಿಲ್ಲೆಯ ಮುಂಬ್ರಾ ಬಳಿಯ ಶಿಲ್ ಫಟಾ ಪ್ರದೇಶದಲ್ಲಿದ್ದಾನೆ ಎಂದು ಗೊತ್ತಾಯಿತು. ಕೊನೆಗೂ ಹುಸಿ ಕರೆ ಮಾಡಿದ ವ್ಯಕ್ತಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾದರು.