ಉದ್ಯಮಿ ರಾಜ್ ಕುಂದ್ರಾಗೆ ಜಾಮೀನು ಮಂಜೂರು

ಬಾಲಿವುಡ್:ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಜೈಲು ಸೇರಿದ್ದ ಬಾಲಿವುಡ್​ ಬೆಡಗಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್​ ಕುಂದ್ರಾಗೆ ಮುಂಬಯಿ ನ್ಯಾಯಾಲಯ ಜಾಮೀನು ನೀಡಿದೆ.
50 ಸಾವಿರ ಶ್ಯೂರಿಟಿಯೊಂದಿಗೆ ನ್ಯಾಯಾಲಯ ಜಾಮೀನು ನೀಡಿದೆ. ಈ ಹಿಂದೆ ಜಾಮೀನು ಕೋರಿ ರಾಜ್​ ಕುಂದ್ರಾ ಸೆಷನ್ಸ್​ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ, ಸೆಷನ್ಸ್​ ನ್ಯಾಯಾಲಯ ಈ ಅರ್ಜಿ ವಜಾ ಮಾಡಿತ್ತು. ಇದನ್ನು ಪ್ರಶ್ನಿಸಿ ಅವರು ಬಾಂಬೆ ಹೈ ಕೋರ್ಟ್​ನಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಅವರಿಗೆ ಜಾಮೀನು ನೀಡಿದೆ.

ಪ್ರಕರಣದಲ್ಲಿ ಬಂಧಿಯಾರಗಿರುವ ಮತ್ತೊಬ್ಬ ಆರೋಪಿಯಾದ ರಾಜ್ ಕುಂದ್ರಾ ಸಂಸ್ಥೆಯೊಂದರ ಐಟಿ ಮುಖ್ಯಸ್ಥ ರಯಾನ್ ಥಾರ್ಪೆಗೆ ಕೂಡ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.ಉದ್ಯಮಿ ರಾಜ್​ ಕುಂದ್ರಾ ಪರವಾಗಿ ವಾದಿಸಿದ ವಕೀಲ ಪ್ರಶಾಂತ್​ ಪಾಟೀಲ್​, ವಿಡಿಯೋ ತಾಣಗಳಿಗೆ ಯಾವ ರೀತಿಯ ವಿಷಯವನ್ನು ಅಪ್ಲೋಡ್ ಮಾಡಬೇಕೆಂದು ಸೆಲೆಬ್ರಿಟಿ ಮತ್ತು ನಿರ್ಮಾಪಕರು ನಿರ್ಧರಿಸುತ್ತಾರೆ. ಏನನ್ನು ಅಪ್‌ಲೋಡ್ ಮಾಡಬೇಕೆಂದು ಕುಂದ್ರಾ ಅಥವಾ ರಯಾನ್ ನಿರ್ಧರಿಸಲಿಲ್ಲ. 1400 ಪುಟಗಳ ಚಾರ್ಜ್‌ಶೀಟ್‌ನಲ್ಲಿ, ಕುಂದ್ರಾ ಅಪ್‌ಲೋಡ್ ಮಾಡುತ್ತಿರುವುದನ್ನು ತೋರಿಸುವ ಒಂದು ಸಾಕ್ಷ್ಯವೂ ಇಲ್ಲ ಎಂದು ಕೋರ್ಟ್​ಗೆ ತಿಳಿಸಿದರು.

ಇನ್ನು ರಾಜ್​ ಕುಂದ್ರಾ ಅವರಿಗೆ ಜಾಮೀನು ನೀಡಿದರೆ ಸಾಕ್ಷ್ಯಾ ನಾಶ ಮಾಡುವ ಸಾಧ್ಯತೆ ಇದೆ ಎಂದು ಪ್ರಾಸಿಕ್ಯೂಷನ್​ ಪ್ರತಿವಾದಿಸಿತು.ಇಂದು ಸಂಜೆ ಪ್ರಕರಣ ಆಲಿಸಿದ ನ್ಯಾಯಾಲಯ ಜಾಮೀನು ನೀಡಿದ್ದು, ನ್ಯಾಯಾಲಯದ ಕೆಲ ಕಾರ್ಯಗಳು ಮುಗಿದ ವೇಳೆ ಅವರು ಇಂದು ಜೈಲಿನಿಂದ ಬಿಡುಗಡೆಯಾಗುವುದು ಅನುಮಾನವಾಗಿದೆ. ನಾಳೆ ಅಥವಾ ನಾಡಿದ್ದು, ರಾಜ್​ ಕುಂದ್ರಾ ಬಿಡುಗಡೆ ಆಗಲಿದ್ದಾರೆ.ಕಳೆದ ಎರಡು ತಿಂಗಳ ಹಿಂದೆ ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣ (pornography) Case ಸಂಬಂಧಿಸಿದಂತೆ ಮುಂಬೈ ಪೊಲೀಸರು ಉದ್ಯಮಿ ರಾಜ್​ ಕುಂದ್ರಾ ಅವರನ್ನು ಬಂಧಿಸಿದ್ದರು. ರಾಜ್​ ಕುಂದ್ರಾ ಜೊತೆಗೆ ಆತನ ಸಹಚರ ಮತ್ತು ಪ್ರಕರಣದ ಮತ್ತೊರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು.

ಈ ಪ್ರಕರಣದಲ್ಲಿ ತನ್ನನ್ನು ಬಲಿಪಶು ಮಾಡಲಾಗಿದೆ. ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಾನು ಭಾಗಿಯಾಗಿದ್ದೇನೆ ಎಂಬ ಕುರಿತು ಯಾವುದೇ ಸಾಕ್ಷಿಗಳು ಇಲ್ಲ ಎಂದು ರಾಜ್​ ಕುಂದ್ರಾ ಅರ್ಜಿಯಲ್ಲಿ ತಿಳಿಸಿದ್ದರು. ಕಳೆದ ಗುರುವಾರ ಉದ್ಯಮಿ ರಾಜ್​ ಕುಂದ್ರಾ ಮೇಲೆ 1400 ಪುಟಗಳ ಚಾರ್ಜ್​ ಶೀಟ್​ ಅನ್ನು ಮುಂಬೈ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಮುಂಬೈ ಪೊಲೀಸರು ಎಲ್ಲಾ ದಿಕ್ಕುಗಳಿಂದಲೂ ತನಿಖೆ ನಡೆಸುತ್ತಿದ್ದರು. ರಾಜ್​ಕುಂದ್ರಾರ ಪೋರ್ನ್​​ ಆಯಪ್​, ಅಕ್ರಮವಾಗಿ ಕೋಟ್ಯಂತರ ರೂಪಾಯಿ ಗಳಿಕೆ ಸಂಬಂಧ ಹಲವು ಸಂಗತಿಗಳು ಕುರಿತು ಕೆದಕಿ ವಿಚಾರಣೆ ನಡೆಸಿದ್ದರು. ಇನ್ನು ಈ ಪ್ರಕರಣದಿಂದ ಸಾಕಷ್ಟು ಮುಜಗರಕ್ಕೆ ಒಳಗಾಗಿರುವ ನಟಿ ಶಿಲ್ಪಾ ಶೆಟ್ಟಿ ಸಾಕಷ್ಟು ವಿಚಲಿತರಾಗಿದ್ದು, ರಾಜ್​ ಕುಂದ್ರಾ ಅವರಿಂದ ದೂರ ಆಗಬೇಕು ಎಂದು ನಿರ್ಧರಿಸಲಿದ್ದಾರೆ ಎನ್ನಲಾಗಿತ್ತು. ಪ್ರಕರಣ ಕುರಿತು ನಟಿ ಶಿಲ್ಪಾ ಶೆಟ್ಟಿ ಅವರನ್ನು ತನಿಖೆಗೆ ಒಳಪಡಿಸಲಾಗಿತ್ತು. ಈ ವೇಳೆ ಹೇಳಿಕೆ ದಾಖಲಿಸಿರುವ ಅವರು, ತಮ್ಮ ಕಾರ್ಯದಲ್ಲಿ ತಾವು ಮುಳುಗಿದ ಹಿನ್ನಲೆ ರಾಜ್​ ಕುಂದ್ರಾ ಏನು ಮಾಡುತ್ತಿದ್ದಾರೆ ಎಂಬ ಬಗ್ಗೆ ಹೆಚ್ಚು ಚಿಂತಿಸಲಯ ಹೋಗಲಿಲ್ಲ ಎಂದಿದ್ದರು.

Swathi MG

Recent Posts

ಕಾಂಗ್ರೆಸ್ ಪರ ಮತ ಹಾಕಿಸಿದ್ದಕ್ಕೆ ಯುವಕನ ಕೊಲೆ

ಚುನಾವಣೆ ಮುಗಿದರೂ ಹಗೆತನ ಮುಗಿಯಲಿಲ್ಲ. ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆ ಯುವಕನೊಬ್ಬ ಕೊಲೆಯಾಗಿದ್ದಾನೆ. ಜಾವೀದ್ ಚಿನ್ನಮಳ್ಳಿ (25)ಹತ್ಯೆಯಾದವನು. ಕಲಬುರಗಿಯ ಅಫಜಲಪುರ…

8 mins ago

ಆನ್‌ಲೈನ್ ಟ್ರೇಡಿಂಗ್: 17.35 ಲಕ್ಷ ರೂ. ವಂಚನೆ

ಆನ್‌ಲೈನ್ ಪಾರ್ಟ್‌ಟೈಮ್ ಕೆಲಸ ಹಾಗೂ ಆನ್‌ಲೈನ್ ಟ್ರೇಡಿಂಗ್ ಮೇಸೆಜ್ ನ‌ ಬಲೆಗೆ ಬಿದ್ದ ವ್ಯಕ್ತಿಯೊಬ್ಬರು ಬರೋಬ್ಬರಿ 17.35 ಲಕ್ಷ ರೂ.…

29 mins ago

ಬಿಸಿಲಿನ ತಾಪ, ಮೇವಿನ ಕೊರತೆಯಿಂದ ಸಾವಿಗೀಡಾಗುತ್ತಿವೆ ಸಾಕುಪ್ರಾಣಿಗಳು

ಹೆಚ್ಚುತ್ತಿರುವ ಬಿಸಿಲಿನ ತಾಪ ಹಾಗೂ ಸಮರ್ಪಕ ಮೇವು ದೊರಕದೆ ಕಾಡಂಚಿನ ಗ್ರಾಮಗಳ ಜಾನುವಾರು, ಸಾಕುಪ್ರಾಣಿಗಳು ಸಾವಿಗೀಡಾಗುತ್ತಿವೆ.

50 mins ago

ದೊಡ್ಡಬಳ್ಳಾಪುರ: ಹಳೇ ದ್ವೇಷಕ್ಕೆ ಯುವಕನ ಕತ್ತು ಕುಯ್ದು ಕೊಲೆ

ಹಳೇ ದ್ವೇಷಕ್ಕೆ ನಡುರಸ್ತೆಯಲ್ಲಿ ಯುವಕನ ಕತ್ತು ಕುಯ್ದು ಕೊಲೆ ಮಾಡಿದ ಘಟನೆ ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗದಲ್ಲಿ ನಡೆದಿದೆ.

1 hour ago

ಕೇಂದ್ರ ಸೂಚನೆ ನೀಡಿದ ಕೂಡಲೇ ರಾಜ್ಯದಲ್ಲಿ ಸಿಎಎ ಅನುಷ್ಠಾನ: ಮೋಹನ್‌ ಯಾದವ್‌

ದೇಶಾದ್ಯಂತ ಚುನಾವಣೆಗ ಅಂತ್ಯಗೊಳುವುದಕ್ಕೂ ಮುನ್ನ ವಿವಿಧ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪ್ರಕ್ರಿಯೆ ಆರಂಭಿಸಬೇಕೆಂದು ಕೇಂದ್ರ ನಿರ್ಧರಿಸಿದೆ.

1 hour ago

ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಮಾನಸಿಕ ಅಸ್ವಸ್ಥ

ವ್ಯಕ್ತಿಯೊಬ್ಬ ತನ್ನ ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ  ಸೀತಾಪುರದಲ್ಲಿ ನಡೆದಿದೆ.

2 hours ago