ಭಾರತದ ಮಹಿಳಾ ವೇಗದ ಬೌಲರ್ ಜೂಲನ್ ಗೋಸ್ವಾಮಿ ಅವರ ಬಯೋಪಿಕ್ ‘ಚಕ್ಡಾ ಎಕ್ಸ್ಪ್ರೆಸ್’ ಸಿನಿಮಾದಲ್ಲಿ ನಟಿಸಲಿರುವ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಈಗಾಗಲೇ ಭರ್ಜರಿ ತಯಾರಿ ಆರಂಭಿಸಿದ್ದಾರೆ.
ಈ ಕುರಿತು ಪೂರ್ವ ಸಿದ್ಧತೆಯಲ್ಲಿರುವ ಅನುಷ್ಕಾ, ಎರಡು ಫೋಟೋಗಳನ್ನು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದು, ಗ್ರಿಪ್ ಬೈ ಗ್ರಿಪ್ ಎಂದು ಬರೆದುಕೊಂಡಿದ್ದಾರೆ. ಇನ್ನು ಅನುಷ್ಕಾ ಪೋಸ್ಟ್ಗೆ ಕ್ರಿಕೆಟರ್ ಜೂಲನ್ ಗೋಸ್ವಾಮಿ ಪ್ರತಿಕ್ರಿಯಿಸಿದ್ದು, ತುಂಬಾ ಚೆನ್ನಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ವಿಶ್ವ ಮಹಿಳಾ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ವೇಗದ ಬೌಲರ್ ಜೂಲನ್ ಗೋಸ್ವಾಮಿಯವರ ಅದ್ಭುತ ಪ್ರಯಾಣವನ್ನು ಆಧಾರವಾಗಿಟ್ಟುಕೊಂಡು ಚಕ್ಡಾ ಎಕ್ಸ್ಪ್ರೆಸ್ ಸಿನಿಮಾವನ್ನು ನಿರ್ಮಿಸಲಾಗುತ್ತಿದೆ.