ಬಾಲಿವುಡ್

ಜಗತ್ತಿನ ಅತಿ ಎತ್ತರದ ಮೊಬೈಲ್ ಥಿಯೇಟರ್ ನಲ್ಲಿ ಅಕ್ಷಯ್ ಕುಮಾರ್ ‘ಬೆಲ್‌ ಬಾಟಮ್‌’ ಚಿತ್ರ

ಮುಂಬೈ : ಜಗತ್ತಿನ ಅತಿ ಎತ್ತರದ ಮೊಬೈಲ್ ಥಿಯೇಟರ್ ಲಡಾಖ್ ನಲ್ಲಿ  ಆರಂಭಗೊಂಡಿದೆ.ಈ ಸಮುದ್ರ ಮಟ್ಟದಿಂದ ಸುಮಾರು 11,562 ಅಡಿ ಎತ್ತರದಲ್ಲಿ ಕಡಿಮೆ ವೆಚ್ಚದಲ್ಲಿ ಎಲ್ಲ ರೀತಿಯ ಸೌಲಭ್ಯಗಳನ್ನು ಒಳಗೊಂಡ ಈ ಮೊಬೈಲ್ ಥಿಯೇಟರ್ ಅನ್ನು ನಿರ್ಮಿಸಲಾಗಿದೆ. ದೂರದ ಕುಗ್ರಾಮಗಳ ಜನರೂ ಸಹ ಸಿನಿಮಾಗಳಿಗೆ ಹತ್ತಿರವಾಗಬೇಕು ಎಂಬ ಉದ್ದೇಶದಿಂದ ಚಿತ್ರಮಂದಿರವನ್ನು ಸೇವೆಗೆ ಲಭ್ಯವಾಗಿಸಿರುವೆ ಎಂದು ಪಿಕ್ಚರ್‌ ಟೈಮ್‌ ಸ್ಥಾಪಕ, ಸಿಇಒ ಸುಶೀಲ್‌ ಹೇಳಿದ್ದಾರೆ.

ಬಾಲಿವುಡ್‌ ನಟ ಅಕ್ಷಯ್ ಕುಮಾರ್ ಅಭಿನಯದ ‘ಬೆಲ್‌ ಬಾಟಮ್‌’ ಚಿತ್ರವನ್ನು ಈ ಥಿಯೇಟರ್‌ ನಲ್ಲಿ ಮೊದಲ ಬಾರಿಗೆ ಪ್ರದರ್ಶಿಸಲಾಯಿತು. ಈ ವಿಷಯವನ್ನು ಅಕ್ಷಯ್ ಕುಮಾರ್ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.

ಲಡಾಖ್‌ನ ಲೇಹ್‌ನಲ್ಲಿ ಸ್ಥಾಪಿಸಲಾಗಿರುವ ವಿಶ್ವದ ಅತಿ ಎತ್ತರದ ಮೊಬೈಲ್ ಥಿಯೇಟರ್‌ನಲ್ಲಿ ‘ಬೆಲ್ ಬಾಟಮ್’ ಚಲನಚಿತ್ರವನ್ನು ಪ್ರದರ್ಶಿಸುವುದು ನನಗೆ ದೊರೆತ ಗೌರವ ಎಂದು ಭಾವಿಸಿದ್ದೇನೆ. ಇದರಿಂದ  ನನ್ನ ಮನಸ್ಸು ಆನಂದಗೊಂಡಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಈ ಚಿತ್ರ ಆಕ್ಷನ್ ಥ್ರಿಲ್ಲರ್ ಆಗಿದ್ದು ಇದನ್ನು ರಂಜಿತ್ ಎಂ. ತಿವಾರಿ ನಿರ್ದೇಶಿಸಿದ್ದಾರೆ. ವಾಣಿ ಕಪೂರ್, ಲಾರಾ ದತ್ತಾ ಪ್ರಮುಖ ಪಾತ್ರ ಪೋಷಿಸಿದ್ದಾರೆ. ಹಲವಾರು ಬಾರಿ ವಿಳಂಬಗೊಂಡು ನಂತರ ಬಿಡುಗಡೆಗೊಂಡ ಈ ಚಿತ್ರ ಪ್ರೇಕ್ಷಕರ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿದೆ.

Raksha Deshpande

Recent Posts

ಕೇಜ್ರಿವಾಲ್‌ ನಾಚಿಕೆಯಿಲ್ಲದೇ ಆರೋಪಿ ಬಿಭವ್‌ ಕುಮಾರ್‌ ಜೊತೆ ತಿರುಗಾಟ: ನಿರ್ಮಲಾ ಸೀತಾರಾಮನ್‌

ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆಯನ್ನು ಖಂಡಿಸಿ ಮಾತನಾಡದ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಕೇಂದ್ರ ಹಣಕಾಸು ಸಚಿವೆ…

11 seconds ago

ಈಜಲು ಹೋಗಿ‌ದ್ದ ಮೂವರು ನೀರುಪಾಲು: 5 ಜನ ಪ್ರಾಣಾಪಾಯದಿಂದ ಪಾರು

ಈಜಲು ಹೋಗಿ‌ದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.

23 mins ago

“ಪಟ್ಲ ಸಂಭ್ರಮ” ಯಶಸ್ವಿಗೊಳಿಸಲು ಪಟ್ಲ ಸತೀಶ್ ಶೆಟ್ಟಿ ಕರೆ

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…

33 mins ago

ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ

ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…

38 mins ago

ಹೊಸ ರುಚಿ: ಅವಲಕ್ಕಿ ಹುಳಿ ಮಾಡುವುದು ಹೇಗೆ?

ಗಡಿಬಿಡಿಯ ಜೀವನದಲ್ಲಿ ಬೆಳಗ್ಗಿನ ಉಪಹಾರ ಮಾಡಿಕೊಂಡು ಆಫೀಸಿಗೆ ಹೋಗುವುದೇ ಸವಾಲ್. ಇಂತಹ  ಸಂದರ್ಭದಲ್ಲಿ ಅವಲಕ್ಕಿ ಇದ್ದರೆ ಅದರಿಂದ ಹುಳಿ ತಯಾರಿಸಿ…

45 mins ago

ಬಾವಿಗೆ ಬಿದ್ದ ಮಗುವನ್ನು ರಕ್ಷಿಸಿದ ಯುವಕನಿಗೆ ಮೆಚ್ಚುಗೆಯ ಸುರಿಮಳೆ

ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ…

55 mins ago