ಡ್ರಗ್ಸ್ ಪ್ರಕರಣದಲ್ಲಿ ಜೈಲುವಾಸ ಅನುಭವಿಸುತ್ತಿರುವ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ರ ಜಾಮೀನು ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 26 ರಂದು ಬಾಂಬೆ ಹೈಕೋರ್ಟ್ ನಡೆಸಲಿದೆ.
ಅಕ್ಟೋಬರ್ 2 ರಂದು ಪುತ್ರ ಆರ್ಯನ್ ಖಾನ್ ಸೇರಿದಂತೆ ಒಟ್ಟು 11 ಮಂದಿಯನ್ನು ಮಾದಕ ವಸ್ತು ನಿಯಂತ್ರಣ ದಳ (ಎನ್ಸಿಬಿ) ಬಂಧಿಸಿತ್ತು. ನಿನ್ನೆಯಷ್ಟೇ ಆರ್ಯನ್ ಖಾನ್ ಸೇರಿದಂತೆ ಮೂವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದ ಮುಂಬೈನ ವಿಶೇಷ ಎನ್ಡಿಪಿಎಸ್ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿತ್ತು.
ಈ ಆದೇಶವನ್ನು ಪ್ರಶ್ನಿಸಿ ಆರ್ಯನ್ ಖಾನ್ ಪರ ವಕೀಲ ಅಲಿ ಕಾಶೀದ್ ದೇಶಮುಖ್ ಅವರು ಬಾಂಬೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ಅ.26ಕ್ಕೆ ಬಾಂಬೆ ಹೈಕೋರ್ಟ್ ವಿಚಾರಣೆ ನಡೆಸಲಿದೆ.