ತನ್ನ ಹೇಳಿಕೆ ತಪ್ಪೆಂದು ಸಾಬೀತಾದರೆ ಕ್ಷಮೆಯಾಚಿಸುವೆ, ಪದ್ಮಶ್ರೀ ಪ್ರಶಸ್ತಿ ಹಿಂದಿರುಗಿಸುವೆ: ಕಂಗನಾ ರಣಾವತ್

‘ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿದ್ದು 2014 ರಲ್ಲಿ. 1947ರಲ್ಲಿ ದೇಶಕ್ಕೆ ಸಿಕ್ಕಿದ್ದು ಅದು ಭಿಕ್ಷೆ’ ಎಂಬ ಬಾಲಿವುಡ್ ನಟಿ -ನಿರ್ಮಾಪಕಿ ಕಂಗನಾ ರಣಾವತ್ ನೀಡಿದ ಹೇಳಿಕೆ ವಿವಾದಕ್ಕೆ ತಿರುಗಿದ್ದು, ವಿವಿಧ ರಾಜಕೀಯ ಪಕ್ಷಗಳು ಕಂಗನಾ ಹೇಳಿಕೆಯನ್ನು ಖಂಡಿಸಿದ್ದು, ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಹಿಂದಿರುಗಿಸುವಂತೆ ಒತ್ತಾಯಿಸಿದೆ.

ಇನ್ನು ತನ್ನ ಹೇಳಿಕೆ ವಿವಾದವಾಗುತ್ತಿದ್ದಂತೆ ಈ ಕುರಿತು ಸ್ಪಷ್ಟನೆ ನೀಡಿದ ಕಂಗನಾ , ತಾವು ನೀಡಿದ ಸ್ವಾತಂತ್ರ್ಯದ ಕುರಿತ ಹೇಳಿಕೆ ತಪ್ಪೆಂದು ಸಾಬೀತಾದರೆ ಕ್ಷಮೆಯಾಚಿಸುವುದಾಗಿ ಹಾಗೂ ಪ್ರತಿಷ್ಠಿತ ಪದ್ಮಶ್ರೀಪ್ರಶಸ್ತಿ ಹಿಂದಿರುಗಿಸುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಪುಸ್ತಕವೊಂದರ ಆಯ್ದ ಭಾಗವನ್ನು ಹಂಚಿಕೊಂಡಿರುವ ನಟಿ, 1857ರ ಮೊದಲ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸ್ವಾತಂತ್ರ್ಯ ಹೋರಾಟದ ಜೊತೆಗೆ ಸುಭಾಷ್ ಚಂದ್ರ ಬೋಸ್, ರಾಣಿ ಲಕ್ಷ್ಮೀಬಾಯಿ ಮತ್ತು ವೀರ ಸಾವರ್ಕರ್ ಅವರಂತಹ ಶ್ರೇಷ್ಠರ ತ್ಯಾಗವನ್ನು ಸಂದರ್ಶನದಲ್ಲಿ ಉಲ್ಲೇಖಿಸಲಾಗಿದೆ.

1857ರ ಸ್ವಾತಂತ್ರ್ಯ ಹೋರಾಟ ನನಗೆ ತಿಳಿದಿದೆ. 1947 ರಲ್ಲಿ ಯಾವ ಯುದ್ಧ ನಡೆಯಿತು ಎಂಬುದು ನನಗೆ ತಿಳಿದಿಲ್ಲ. ಯಾರಾದರೂ ನನ್ನ ಅರಿವಿಗೆ ತಂದರೆ ನಾನು ನನ್ನ ಪದ್ಮಶ್ರೀಯನ್ನು ಹಿಂದಿರುಗಿಸುತ್ತೇನೆ ಮತ್ತು ಕ್ಷಮೆಯಾಚಿಸುತ್ತೇನೆ. ದಯವಿಟ್ಟು ಇದಕ್ಕೆ ನನಗೆ ಸಹಾಯ ಮಾಡಿ ಎಂದು ಬರೆದುಕೊಂಡಿದ್ದಾರೆ.

ಕಂಗನಾ ಹಂಚಿಕೊಂಡಿರುವ ಪುಸ್ತಕವೊಂದರ ಆಯ್ದ ಭಾಗದಲ್ಲಿ ಬಾಲಗಂಗಾಧರ ತಿಲಕ್​, ಅರವಿಂದ್​ ಘೋಷ್​, ಬಿಪಿನ್​ ಚಂದ್ರಪಾಲ್​ರಂತಹ ಕ್ರಾಂತಿಕಾರಿ ಹೋರಾಟಗಾರರು ಐಎನ್​ಸಿ (INC -Indian National Congress) ವಿರುದ್ಧ ನೀಡಿರುವ ಹೇಳಿಕೆಗಳು ಇವೆ.

ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸಲು ಭಾರತ ಸಜ್ಜಾಗುತ್ತಿರುವಾಗ ನಟಿಯ ಈ ಹೇಳಿಕೆಯನ್ನು ಕಾಂಗ್ರೆಸ್, ಎಎಪಿ, ಶಿವಸೇನೆ, ಎನ್​ಸಿಪಿ ಸೇರಿದಂತೆ ಅನೇಕ ರಾಜಕೀಯ ಪಕ್ಷಗಳು ಖಂಡಿಸಿದ್ದು, ಕಂಗನಾಗೆ ನೀಡಿದ ಪ್ರಶಸ್ತಿಗಳನ್ನು ಹಿಂಪಡೆದುಕೊಳ್ಳುವಂತೆ ಒತ್ತಾಯಿಸುತ್ತಿವೆ.

Sneha Gowda

Recent Posts

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

19 mins ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

37 mins ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

58 mins ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

1 hour ago

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

2 hours ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

2 hours ago