ಬಾಲಿವುಡ್: ಬಾಲಿವುಡ್ನ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಎಲ್ಲೆಡೆ ಸದ್ದು ಮಾಡುತ್ತಿದೆ. ಜೊತೆಗೆ ಒಂದಷ್ಟು ವಿವಾದಗಳನ್ನು ಕೂಡ ಸೃಷ್ಟಿ ಮಾಡಿದೆ. ಈ ಹಿನ್ನೆಲೆಯಲ್ಲಿ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರಿಗೆ ವೈ ಕೆಟಗರಿ ಭದ್ರತೆ ನೀಡಲಾಗಿದೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ.
ಈ ಸಿನಿಮಾ ನಿರ್ದೇಶನ ಮಾಡಿರುವ ವಿವೇಕ್ ಅಗ್ನಿಹೋತ್ರಿ ಅವರ ವಿರುದ್ಧ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಆಧರಿಸಿ ಈ ಸಿನಿಮಾ ತಯಾರಾಗಿದೆ. ಈ ಚಿತ್ರದಲ್ಲಿ ತೋರಿಸಲಾದ ದೃಶ್ಯಗಳ ಬಗ್ಗೆ ಕೆಲವರಿಂದ ತಕರಾರು ವ್ಯಕ್ತವಾಗಿದೆ.
ಅಭಿಷೇಕ್ ಅಗರ್ವಾಲ್ ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಅನುಪಮ್ ಖೇರ್, ದರ್ಶನ್ ಕುಮಾರ್, ಪಲ್ಲವಿ ಜೋಶಿ, ವಿಥುನ್ ಚಕ್ರವರ್ತಿ, ಪುನೀತ್ ಇಸ್ಸಾರ್, ಪ್ರಕಾಶ್ ಬೆಳವಾಡಿ ಮುಂತಾದವರು ನಟಿಸಿದ್ದಾರೆ. ಮಾರ್ಚ್ 11 ರಂದು ಸಿನಿಮಾ ರಿಲೀಸ್ ಆಗಿತ್ತು.