ರಾಜಮೌಳಿ ನಿರ್ದೇಶನದ ಬಹುನಿರೀಕ್ಷಿತ ಆರ್ ಆರ್ ಆರ್ ಚಿತ್ರದ ವಿಡಿಯೋ ತುಣುಕು ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.
ಈ ಸಿನಿಮಾ ಜ.7ರಂದು ಬಿಡುಗಡೆಯಾಗಲು ಸಜ್ಜಾಗಿದ್ದು, ಚಿತ್ರತಂಡ ಮೊದಲ ತುಣುಕನ್ನು ರಿಲೀಸ್ ಮಾಡಿದೆ. ಬಿಡುಗಡೆಯಾದ 24 ಗಂಟೆಗಳಲ್ಲಿ 75 ಲಕ್ಷಕ್ಕೂ ಹೆಚ್ಚು ಜನ ವೀಕ್ಷಿಸಿದ್ದು, ಅಪಾರ ಮೆಚ್ಚುಗೆ ಪಡೆದಿದೆ.
ಇದು 45 ಸೆಕೆಂಡ್ ಗಳ ವಿಡಿಯೋ ಆಗಿದ್ದು, ಆಕ್ಷನ್ ದೃಶ್ಯಗಳಿಂದ ಕೂಡಿದೆ. ಸಂಕ್ರಾಂತಿ ಹಬ್ಬಕ್ಕೆ ಉಡುಗೊರೆಯಾಗಿ ಈ ಸಿನಿಮಾ ತೆರೆ ಮೇಲೆ ಬರಲಿದ್ದು, ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
400 ಕೋಟಿ ರೂ.ಗಳ ಬಿಗ್ ಬಜೆಟ್ ಸಿನಿಮಾ ಇದಾಗಿದ್ದು, ಈ ಚಿತ್ರದಲ್ಲಿ ರಾಮ್ ಚರಣ್, ಜ್ಯೂನಿಯರ್ ಎನ್ ಟಿ ಆರ್, ಅಜಯ್ ದೇವಗನ್, ಆಲಿಯಾ ಭಟ್ ಸೇರಿದಂತೆ ಎಲ್ಲಾ ಟಾಪ್ ಸಿನಿಮಾ ತಾರೆಯರು ಕಾಣಿಸಿಕೊಳ್ಳಲಿದ್ದಾರೆ.