​ ಮೊದಲ ಮಗುವಿನ ನಿರೀಕ್ಷೆಯ ಖುಷಿಯಲ್ಲಿ ಬಾಲಿವುಡ್​ ನಟಿ ಸೋನಂ ಕಪೂರ್!

ಬಾಲಿವುಡ್​ ನಟಿ ಸೋನಂ ಕಪೂರ್​ ಮೊದಲ ಮಗುವಿನ ನಿರೀಕ್ಷೆಯ ಖುಷಿಯಲ್ಲಿದ್ದಾರೆ. ಈ ಬಗ್ಗೆ ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ನಟಿ ತಾನು ತಾಯಿಯಾಗಲಿರುವ ಕುರಿತು ಬರೆದುಕೊಂಡಿದ್ದಾರೆ.

ನಟಿ ಸೋನಂ ಕಪೂರ್​ ತಮ್ಮ ಪತಿ ಉದ್ಯಮಿಯಾದ ಆನಂದ್​ ಅಹುಜಾ ಅವರ ಮಡಿಲಲ್ಲಿ ಮಲಗಿರುವ ಫೋಟೊವನ್ನು ಸೋಷಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ‘ನಾಲ್ಕು ಕೈಗಳು, ಎರಡು ಹೃದಯ, ಒಂದು ಕುಟುಂಬ ಎಂಬ ಕ್ಯಾಪ್ಶನ್ ಬರೆದುಕೊಂಡಿದ್ದಾರೆ.

‘ನಾವು ನಿನ್ನನ್ನು ಸಾಧ್ಯವಾದಷ್ಟು ಉತ್ತಮವಾಗಿ ಬೆಳೆಸಲು ಇಷ್ಟಪಡುತ್ತೇವೆ. ನಿನ್ನ ಪ್ರತಿ ಹೆಜ್ಜೆಯಲ್ಲೂ ನಾವಿರುತ್ತೇವೆ. ಪ್ರೀತಿ ಮತ್ತು ಬೆಂಬಲ ಸದಾ ನಿನ್ನೊಂದಿಗಿರುತ್ತದೆ. ನಿನ್ನ ಆಗಮನಕ್ಕೆ ಕಾಯುತ್ತಿದ್ದೇವೆ’ ಎಂದು ಬರೆದುಕೊಂಡಿದ್ದಾರೆ.

ಸೋನಂರ ಈ ಖುಷಿಯ ಪೋಸ್ಟ್​ಗೆ ನಟ-ನಟಿಯರು ಕಮೆಂಟ್​ ಮಾಡಿ ಶುಭ ಹಾರೈಸಿದ್ದಾರೆ. ಸೋನಂ ಕಪೂರ್​ ಅವರು ಉದ್ಯಮಿ ಆನಂದ್ ಅಹುಜಾ ಅವರನ್ನು ಮೇ 8, 2018ರಂದು ಮುಂಬೈನಲ್ಲಿ ವಿವಾಹವಾಗಿದ್ದರು.

Sneha Gowda

Recent Posts

ಅಂಜಲಿ ಹತ್ಯೆ ಪ್ರಕರಣ : ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ ಚೇತರಿಕೆ

ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಸಹೋದರಿಯ ಹತ್ಯೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ಯಶೋದಾ…

18 mins ago

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ : ಬಿಜೆಪಿ ಮಾಜಿ ಸರಪಂಚ್ ಸಾವು

ಜಮ್ಮು-ಕಾಶ್ಮೀರದಲ್ಲಿ ಇನ್ನು ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಿನ್ನೆ ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ…

28 mins ago

ವಿಮಾನ ಇಂಜಿನ್‌ನಲ್ಲಿ ಬೆಂಕಿ : ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್‌ ಇಂಡಿಯಾ ಎಕ್ಸಪ್ರೆಸ್‌ ವಿಮಾನವು ಶನಿವಾರ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್‌ ಮಾಡಿದೆ.…

36 mins ago

ಸಿಂಗಾಪುರದಲ್ಲಿ ಹೆಚ್ಚುತ್ತಿರುವ ಕೊರೊನಾ ಅಲೆ ಭೀತಿ : ಮಾಸ್ಕ್‌ ಧರಿಸುವಂತೆ ಆದೇಶ

ಸಿಂಗಾಪುರದಲ್ಲಿ ಕೊರೊನಾ ಸೋಂಕಿನ ಹೊಸ ಅಲೆ ಭೀತಿ ಎದುರಾಗಿದ್ದು, ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಜನರಿಗೆ ಮಾಸ್ಕ್‌…

38 mins ago

ಸುರತ್ಕಲ್: ಶಬರಿಮಲೆ ಹದಿನೆಂಟು ಮೆಟ್ಟಿಲು ಹತ್ತುವ ವೇಳೆ ಹೃದಯಾಘಾತ !

ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಸುರತ್ಕಲ್ ಕಾಟಿಪಳ್ಳ ನಿವಾಸಿ ಸಂದೀಪ್‌ ಶೆಟ್ಟಿ (37) ಅವರು ಹೃದಯಾಘಾತದಿಂದ…

50 mins ago

ಸಿಎಂ ಸಿದ್ದು ತವರು ಕ್ಷೇತ್ರದಲ್ಲಿ ವಾಂತಿ-ಬೇದಿಯಿಂದ ತತ್ತರಿಸಿದ ಗ್ರಾಮಸ್ಥರು ..!

ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿರುವ ಜನರಿಗೆ ತಂಪೆರೆಯುವ ಸಲುವಾಗಿ ಕಳೆದ ಒಂದು ವಾರಗಳಿಂದ ಮಳೆಯು ಧಾರಾಕಾರವಾಗಿ ಸುರಿಯುತ್ತಿದೆ ಇಂತಹ ಸಂದರ್ಭದಲ್ಲಿ ರಾಜ್ಯದ…

59 mins ago