ಯುರೋಪಿಯನ್ ದೇಶ ಫಿನ್ಲೆಂಡ್‌ನಲ್ಲಿ ಪ್ರದರ್ಶನಗೊಳ್ಳುತ್ತಿದೆ ದಿ ಕಾಶ್ಮೀರ್ ಫೈಲ್ಸ್!

ಹೊಸದಿಲ್ಲಿ: ಹಲವು ಅಡೆತಡೆಗಳನ್ನು ಮೆಟ್ಟಿ ನಿಂತು ಭಾರತದಾದ್ಯಂತ ಪ್ರದರ್ಶನಗೊಂಡು ಅದ್ಭುತ ಯಶಸ್ಸನ್ನು ಗಳಿಸುತ್ತಿರುವ ದಿ ಕಾಶ್ಮೀರ್ ಫೈಲ್ಸ್ ಈಗ ವಿದೇಶದಲ್ಲಿಯೂ ತೆರೆ ಕಾಣುತ್ತಿದೆ.

ಇಂದು ಯುರೋಪಿಯನ್ ದೇಶ ಫಿನ್ಲೆಂಡ್‌ನಲ್ಲಿ ಪ್ರದರ್ಶನಗೊಳ್ಳುತ್ತಿದೆ. ಹೆಲ್ಸಿಂಕಿಯಲ್ಲಿ ಕಾಶ್ಮೀರ್ ಫೈಲ್ಸ್ ಚಿತ್ರದ ಪ್ರದರ್ಶನವನ್ನು ಏರ್ಪಡಿಸಲಾಗಿದೆ.

ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಇಂದು ಇತಿಹಾಸ ಸೃಷ್ಟಿಯಾಗುತ್ತಿದೆ, ದ ಕಾಶ್ಮೀರ್ ಫೈಲ್ಸ್ ಈಗ ಫಿನ್‌ಲ್ಯಾಂಡ್‌ನಲ್ಲಿ ಪ್ರದರ್ಶನಗೊಳ್ಳುತ್ತಿದೆ. ಜಮ್ಮು ಕಾಶ್ಮೀರ್ ಲಿಬರೇಷನ್ ಫ್ರಂಟ್ ನ ವಿರೋಧದಿಂದಾಗಿ ವಿಳಂಬವಾಗಿದೆ, ಅದರ ಯುರೋಪಿಯನ್ ಯೂನಿಯನ್ ಪ್ರಧಾನ ಕಛೇರಿಯು ಚಲನಚಿತ್ರವನ್ನು ನಿಲ್ಲಿಸಲು ತನ್ನ ಅತ್ಯುತ್ತಮ ಪ್ರಯತ್ನವನ್ನು ಮಾಡಿದೆ. ಆದರೆ ಸತ್ಯವನ್ನು ಎಂದಾದರೂ ನಿಲ್ಲಿಸಬಹುದೇ? ಎಂದು ಅಗ್ನಿಹೋತ್ರಿ ಟ್ವೀಟ್ ಮಾಡಿ ಪ್ರಶ್ನಿಸಿದ್ದಾರೆ.

ವಿವೇಕ್ ಅಗ್ನಿಹೋತ್ರಿ ಅವರ ನಿರ್ದೇಶನ ಮತ್ತು ನಿರ್ಮಾಣದ ದಿ ಕಾಶ್ಮೀರ್ ಫೈಲ್ಸ್ 1990ರಲ್ಲಿ ಕಾಶ್ಮೀರದಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿದೆ. ಅಲ್ಲಿನ ಕಾಶ್ಮೀರಿ ಪಂಡಿತರನ್ನು ಅಮಾನುಷವಾಗಿ ಕೊಂದು, ಅಲ್ಲಿಂದ ಓಡಿಸಿದ, ಅತ್ಯಾಚಾರ ಘಟನೆಗಳನ್ನಾಧರಿಸಿದ ಚಲನಚಿತ್ರವು ಎಲ್ಲೆಡೆ ಅದ್ಭುತ ಯಶಸ್ಸನ್ನು ಪಡೆದಿದೆ.

Sneha Gowda

Recent Posts

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

19 mins ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

38 mins ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

39 mins ago

ಜೀವ -ಜಲ ಉಳಿಸಲು ಸ್ವಯಂ ಪ್ರೇರಣೆಯ ಪಾಲ್ಗೊಳ್ಳುವಿಕೆ ಮುಖ್ಯ: ಪ್ರಭಾಕರ ಶರ್ಮಾ

ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು  ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ…

41 mins ago

ತಲೆ ಮೇಲೆ ಇಟ್ಟಿಗೆ ಎತ್ತಿ ಹಾಕಿ ಗೆಳೆಯನಿಂದಲೇ ಕೊಲೆ

ಮದ್ಯ ಸೇವನೆಗೆಂದು ಕರೆದೊಯ್ದು ಕೊಲೆ ಮಾಡಿರುವ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

54 mins ago

ಏನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ: ಹೆಚ್.ಡಿ ದೇವೇಗೌಡ

ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಿದ್ದಾರೆ. ಆದ್ರೆ ನೆಲದ ಕಾನೂನು ವ್ಯಾಪ್ತಿಯಲ್ಲಿ ಏನೇನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ.…

1 hour ago