News Karnataka Kannada
Tuesday, April 30 2024
ಬಾಲಿವುಡ್

ರಶ್ಮಿಕಾ ಅಭಿನಯದ ‘ಮಿಷನ್ ಮಜ್ನು’ ಚಿತ್ರೀಕರಣ ಪೂರ್ಣ

Rashmika 30082021
Photo Credit :

ಕನ್ನಡತಿ ರಶ್ಮಿಕಾ ಮಂದಣ್ಣ ನಟನೆಯ ಮೊದಲ ಬಾಲಿವುಡ್ ಚಿತ್ರ ‘ಮಿಷನ್ ಮಜ್ನು’ ಚಿತ್ರೀಕರಣ ಪೂರ್ಣವಾಗಿದೆ.

ಈ ಬಗ್ಗೆ ಅವರು ಸಂತಸವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ‘ಇದು ನನ್ನ ಮೊದಲ ಹಿಂದಿ ಚಿತ್ರ, ಚಿತ್ರೀಕರಣ ಸಮಯದಲ್ಲಿ ನಾನು ತಂಡದೊಂದಿಗೆ ಸಂತಸದ ಸಮಯವನ್ನು ಕಳೆದಿದ್ದೇನೆ. ಸ್ಕ್ರಿಪ್ಟ್ ಕೇಳಿದ ಮೊದಲ ದಿನವೇ ನಾನು ಈ ಚಿತ್ರದ ಭಾಗವಾಗಬೇಕು ಎಂದು ಅನಿಸಿತ್ತು’ ಎಂದು ಹೇಳಿಕೊಂಡಿದ್ದಾರೆ.

ಸಿದ್ಧಾರ್ಥ ಮಲ್ಹೋತ್ರಾ ಈ ಚಿತ್ರದಲ್ಲಿ ರಾ ಏಜೆಂಟ್ ಆಗಿ ಕಾಣಿಸಿಕೊಂಡಿದ್ದಾರೆ. ನಟಿ ರಶ್ಮಿಕಾ ಅವರಿಗೆ ಇದು ಮೊದಲ ಬಾಲಿವುಡ್ ಚಿತ್ರವಾಗಿದ್ದರೆ, ಶಂತನು ಬಾಗ್ಚಿ ಅವರು ನಿರ್ದೇಶನ ಮಾಡುತ್ತಿರುವ ಮೊದಲ ಬಾಲಿವುಡ್ ಸಿನಿಮಾ ಆಗಿರುತ್ತದೆ. ಈ ಮೂಲಕ ಕನ್ನಡ, ತೆಲುಗಿನಲ್ಲಿ ಹವಾ ಸೃಷ್ಟಿಸಿರುವ ರಶ್ಮಿಕಾ ಬಾಲಿವುಡ್‌ನಲ್ಲೂ ಹೊಸ ಅಲೆ ಸೃಷ್ಟಿಸಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು