News Karnataka Kannada
Saturday, April 27 2024
ಬಾಲಿವುಡ್

ಶಾರೂಖ್ ಖಾನ್ ಹಾಗೂ ಕತ್ರಿನಾ ಕೈಫ್ ಗೆ ಕೊರೋನ ಸೋಂಕು ದೃಢ

Shakush Katrina
Photo Credit :

ಮುಂಬೈ: ಅಕ್ಷಯ್ ಕುಮಾರ್, ಕಾರ್ತಿಕ್ ಆರ್ಯನ್ ಮತ್ತು ಆದಿತ್ಯ ರಾಯ್ ಕಪೂರ್ ಸೇರಿದಂತೆ ಹಲವಾರು ಬಾಲಿವುಡ್​​ ನಟರಿಗೆ ಈಗಾಗಲೇ ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿದ್ದು, ಇದೀಗ ಶಾರುಖ್ ಖಾನ್ ಮತ್ತು ಕತ್ರಿನಾ ಕೈಫ್ ಕೂಡ ಈ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

ಇದಕ್ಕೆ ಕಾರಣ ಕಳೆದ ವಾರ ನಿರ್ಮಾಪಕ ಕರಣ್​ ಜೋಹರ್​ ಆಯೋಜಿಸಿದ್ದ ಪಾರ್ಟಿ ಎಂಬ ಸುದ್ದಿ ಹರಿದಾಡುತ್ತಿದೆ. ಬಾಲಿವುಡ್​ನಲ್ಲಿ ಒಬ್ಬರ ಹಿಂದೆ ಒಬ್ಬರಂತೆ ಕೊರೊನಾಗೆ ತುತ್ತಾಗುತ್ತಿರುವುದು ಕಳವಳ ಉಂಟು ಮಾಡಿದೆ. ಸತತವಾಗಿ ಎಲ್ಲರಿಗೂ ಕೊರೊನಾ ಪಾಸಿಟಿವ್ ಬರುತ್ತಿರುವುದಕ್ಕೆ ಕರಣ್ ಜೋಹರ್ ನೀಡಿದ ಪಾರ್ಟಿಯೇ ಕಾರಣ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ವ್ಯಕ್ತವಾಗಿದೆ. ಕರಣ್​ ಜೋಹರ್​ ಅವರ ಮನೆ ಕೋವಿಡ್ ಹಾಟ್ ಸ್ಪಾಟ್ ಆಗಿದೆ ಎಂದು ದೂಷಿಸಲಾಗಿದೆ.

ಇದಲ್ಲದೇ, ಪಾರ್ಟಿಗೆ ಬಂದವರಲ್ಲಿ ಸುಮಾರು 40 -50 ಮಂದಿಗೆ ಕೋವಿಡ್ ಪಾಸಿಟಿವ್ ಇರುವುದು ಕಂಡುಬಂದಿದೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಕರಣ್ ಜೋಹರ್​ ಅವರ ಆಪ್ತರು ಇದನ್ನು ನಿರಾಕರಿಸಿದ್ದಾರೆ. ಈ ಸುದ್ದಿಯಲ್ಲಿ ಯಾವುದೇ ಸತ್ಯವಿಲ್ಲ. ಮನೆ ಕೋವಿಡ್ ಹಾಟ್​ಸ್ಪಾಟ್ ಆಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕರಣ್​ ಜೋಹರ್​ ತಮ್ಮ ಜನ್ಮದಿನದ ಹಿನ್ನೆಲೆಯಲ್ಲಿ ಔತಣಕೂಟವನ್ನು ಆಯೋಜಿಸಿದ್ದರು. ಇದರಲ್ಲಿ ಸಲ್ಮಾನ್, ಶಾರುಖ್, ಅನನ್ಯಾ ಪಾಂಡೆ, ವಿಕ್ಕಿ ಕೌಶಲ್, ಕತ್ರಿನಾ ಕೈಫ್​, ಐಶ್ವರ್ಯಾ ರೈ ಸೇರಿದಂತೆ ಹಲವು ಬಾಲಿವುಡ್ ಸೆಲೆಬ್ರಿಟಿಗಳು ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು