ಬಾಲಿವುಡ್ ನಟಿ ಕಂಗನಾ ರಣಾವತ್ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ. ಈ ವಿಷಯವನ್ನು ಸ್ವತಃ ಅವರೇ ಬಹಿರಂಗಪಡಿಸಿದ್ದಾರೆ. ಸಂದರ್ಶನವೊಂದರಲ್ಲಿ, ಮುಂದಿನ ಐದು ವರ್ಷಗಳಲ್ಲಿ ತಮ್ಮನ್ನು ತಾವು ಹೇಗೆ ನೋಡಿಕೊಳ್ಳುತ್ತೀರಿ ಎಂಬ ನಿರೂಪಕರ ಪ್ರಶ್ನೆಗೆ ಉತ್ತರಿಸಿದ್ದು, ಮದುವೆಯಾಗುವುದಾಗಿ ಹೇಳಿದ್ದಾರೆ.
‘ಮುಂದಿನ ಐದು ವರ್ಷಗಳಲ್ಲಿ ಮದುವೆಯಾಗುವುದೂ ಸೇರಿದಂತೆ ಮುಂದಿನ ಐದು ವರ್ಷಗಳಲ್ಲಿ ನಾನು ಮಕ್ಕಳನ್ನು ಹೊಂದಲು ಬಯಸುತ್ತೇನೆ ಎಂದಿದ್ದಾರೆ.
ಬಾಳ ಸಂಗಾತಿ ಬಗ್ಗೆ ಈವರೆಗೆ ಯಾವುದೇ ಮಾಹಿತಿ ಬಿಟ್ಟುಕೊಡದ ಕಂಗನಾ ರಣಾವತ್ , ಇದೀಗ ಮನದಿಂಗಿತ ವ್ಯಕ್ತಪಡಿಸಿದ್ದು ಕುತೂಹಲ ಹೆಚ್ಚಿಸಿದ್ದಾರೆ. ಶೀಘ್ರದಲ್ಲೇ ಎಲ್ಲರಿಗೂ ತನ್ನ ಭಾವಿ ಪತಿಯ ಬಗ್ಗೆ ತಿಳಿಸಲಿದ್ದಾರೆ ಎಂದು ಬಾಲಿವುಡ್ ಮಾತನಾಡಿಕೊಳ್ಳುತ್ತಿದೆ.
ಮೊನ್ನೆಯಷ್ಟೇ ರಾಷ್ಟ್ರಪತಿಯಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸುತ್ತಿರುವ ನಟಿ ಕಂಗನಾ ರಣಾವತ್ , ಉತ್ತಮ ನಟನೆಗಾಗಿ ದೇಶದ ಅತ್ಯುನ್ನತ ನಾಲ್ಕನೇ ನಾಗರಿಕ ಪ್ರಶಸ್ತಿ ಪದ್ಮಶ್ರೀ ನೀಡಿ ಇತ್ತೀಚೆಗೆ ಗೌರವಿಸಲಾಗಿದೆ.